ಇತ್ತೀಚಿಗೆ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರಕ್ಕೆ ಆಗಮಿಸಿದ್ದ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾಕ್ಟರ್ ಮಾನಸ ಅವರು ಬಾಡದ ಕನಕದಾಸರ ಅರಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ನಮ್ಮ ಸಿಬ್ಬಂದಿಯವರಾದ ಸಂತೋಷ ಮತ್ತು ಮಾರುತಿಯವರು ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಬಗ್ಗೆ ನಾಲ್ಕು ಮಾತುಗಳನ್ನು ಆಡಲು ಕೋರಿದಾಗ ಮುಕ್ತಮನಸ್ಸಿನಿಂದ ಪ್ರಾಧಿಕಾರ, ಬಾಡದ ಅರಮನೆ,ಕಾಮಗಾರಿಗಾರಿಗಳ ಬಗ್ಗೆ ಮಾತನಾಡಿದ್ದಾರೆ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರನ್ನಾಗಿ ಮುಕ್ಕಣ್ಣ ಕರಿಗಾರ ಅವರನ್ನು ಮುಖ್ಯಮಂತ್ರಿಗಳು ಒಳ್ಳೆಯ ಸಂದರ್ಭದಲ್ಲಿ ಒಳ್ಳೆಯ ವ್ಯಕ್ತಿಯನ್ನು ಆಯ್ಕೆ ಮಾಡಿದ್ದಾರೆ’ ಎಂದು ಪ್ರಶಂಸಿಸಿ ಪ್ರೋತ್ಸಾಹಿಸಿದ್ದಾರೆ ಎಂದರು.ಈ ಸಂಧರ್ಭದಲ್ಲಿ ಆಯುಕ್ತರಾದ ಮುಕ್ಕಣ್ಣ ಕರಿಗಾರ ಅವರು ಡಾ.ಮಾನಸರವರ ಹೃದಯವಂತಿಕೆಗೆ ಕೃತಜ್ಞತೆಗಳು ಸಲ್ಲಿಸಿದರು.ಈ ಸಂಧರ್ಭದಲ್ಲಿ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರು, ಹಾವೇರಿ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಲಿಂಗಯ್ಯ ಬಿ ಹಿರೇಮಠ ಇದ್ದರು.