ಫೆ.1ರಂದು ಲಿಂ.ಸಿದ್ದರಮಾನಂದಪುರಿ ಶ್ರೀಗಳ ಪುಣ್ಯಾರಾಧನೆ,ತಿಂಥಣಿ ಬ್ರಿಡ್ಜ್ ಮಠಕ್ಕೆ ಸಿಎಂ ಭೇಟಿ : ಅಯ್ಯಪ್ಪಗೌಡ

ದೇವದುರ್ಗ : ಪೆ.01 ರಂದು  ಕಾಗಿನೆಲೆ ಗುರುಪೀಠದ ತಿಂಥಣಿ ಬ್ರಿಡ್ಜ್ ವಿಭಾಗೀಯ ಗುರುಪೀಠದಲ್ಲಿ ಲಿಂಗೈಕ್ಯ ಪೂಜ್ಯ ಶ್ರೀ ಸಿದ್ಧರಾಮಾನಂದ ಶ್ರೀಗಳ ಪುಣ್ಯಾರಾಧನೆ ಕಾರ್ಯಕ್ರಮವಿದ್ದು ಸಿಎಂ ಸಿದ್ದರಾಮಯ್ಯನವರು ಪುಣ್ಯಾರಾಧನೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು ಕರ್ನಾಟಕ ಪ್ರದೇಶ ಯುವ ಕುರುಬರ ಸಂಘದ ರಾಜ್ಯ ಉಪಾಧ್ಯಕ್ಷರಾದ ಅಯ್ಯಪ್ಪ ಗೌಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫೆ.01ರಂದು ಪೂಜ್ಯರ ನುಡಿನಮನ ಕಾರ್ಯಕ್ರಮಕ್ಕೆ ರಾಜ್ಯದ 150ಕ್ಕೂ ಹೆಚ್ಚು ವಿವಿಧ ಮಠಗಳ ಸ್ವಾಮೀಜಿಯವರು ಆಗಮಿಸಲಿದ್ದಾರೆ.ರಾಜ್ಯದ ವಿವಿಧ ಜಿಲ್ಲೆಗಳ ಕುರುಬ ಸಮಾಜದ ಮುಖಂಡರು ಇತರ ಸಮುದಾಯಗಳ ಮುಖಂಡರು ಸೇರಿದಂತೆ 60 ಸಾವಿರ ಜನ ಸೇರುವ ನಿರೀಕ್ಷೆ ಇದೆ. ನೂತನ ಸ್ವಾಮೀಜಿ ಆಯ್ಕೆ, ಪೂಜ್ಯ ಶ್ರೀ ಸಿದ್ದರಮಾನಂದಪುರಿ ಸ್ವಾಮೀಜಿ ನಡೆಸುತ್ತಿದ್ದ ಚಟುವಟಿಕೆಗಳ ಮುಂದುವರಿಕೆ ಕುರಿತು ಚಿಂತನ ಮಂಥನ ಕಾರ್ಯಕ್ರಮ ನಡೆಯಲಿದೆ.ದೇವದುರ್ಗ ತಾಲೂಕಿನಿಂದ ಸಮುದಾಯದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *