ಡಿಡಿಯು ಕಾನ್ವೆಂಟ್ ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ : ನಿಷ್ಠೆಯಿಂದ ವಿದ್ಯಾಬ್ಯಾಸ ಮಾಡಿದರೆ ಯಶಸ್ಸು ಸಾಧ್ಯ : ಮೇಟಿ

ಶಹಾಪುರ,,
ವಿದ್ಯಾರ್ಥಿಗಳು ಕಠಿಣ ಅಭ್ಯಾಸ ಮಾಡಬೇಕು. ನಿಷ್ಠೆಯಿಂದ ಅಧ್ಯಯನ ಮಾಡಿದರೆ ಯಶಸ್ಸು ಸಾಧಿಸಲು ಸಾಧ್ಯ ಎಂದು ಸಂಸ್ಥೆಯ ಕಾರ್ಯದರ್ಶಿಯಾದ ದೇವೇಂದ್ರಪ್ಪ ಎಟಿ ಹೇಳಿದರು. ನಗರದ ಬಾಪುಗೌಡ ನಗರದ ಡಿಡಿಯು ಕಾನ್ವೆಂಟ್
ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ 2025-2026 ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ನಮ್ಮ ಸಂಸ್ಥೆಯಲ್ಲಿನ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಪಾಸಾಗಿ ನಮ್ಮ ಶಾಲೆಗೆ ಮತ್ತು ತಂದೆ ತಾಯಿಗೆ ಕೀರ್ತಿ ತರಬೇಕು  ಎಂದರು. ನಮ್ಮ ಸಂಸ್ಥೆಯಡಿಯಲ್ಲಿ ನಡೆಯುವ ಡಿಡಿಯು ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಅತಿ ಕಡಿಮೆ ಶುಲ್ಕವನ್ನು ಹೊಂದಿದ್ದು ಪ್ರತಿಯೊಬ್ಬರೂ ನಮ್ಮ ಕಾಲೇಜಿನಲ್ಲಿ ದಾಖಲಾತಿಯನ್ನು ಪಡೆದುಕೊಂಡು ನಿಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸಬೇಕೆಂದು ಹೇಳಿದರು.
ಕಾರ್ಯಕ್ರಮದಲ್ಲಿ ಪ್ರತೀಕ್ ಜೈನ್ ಸಿಎ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯು ಉನ್ನತ ಸ್ಥಾನಕ್ಕೆ ಏರಬೇಕಾದರೆ ಇಂದಿನಿಂದಲೇ ಕಠಿಣವಾದ ಅಭ್ಯಾಸದಲ್ಲಿ ತೊಡಗಿಕೊಂಡಾಗ ಮಾತ್ರ ಉನ್ನತ ಶ್ರೇಣಿಗೆ ಹೋಗಲು ಸಾಧ್ಯ. ಆರೋಗ್ಯದ ಜೊತೆಗೆ ವಿದ್ಯಾಭ್ಯಾಸವನ್ನು ಮಾಡಿ ಭಯಮುಕ್ತರಾಗಿ ಪರೀಕ್ಷೆಯನ್ನು ಎದುರಿಸಿ ಎಂದು 10ನೇ ತರಗತಿ ವಿದ್ಯಾರ್ಥಿಗಳಿಗೆ‌ ತಿಳಿ ಹೇಳಿದರು.
 ಪ್ರಾಂಶುಪಾಲರಾದ ಕಿರಣ ಪತ್ತಾರ ಮಾತನಾಡಿ, ಇಂದಿನ ದಿನಗಳಲ್ಲಿ ವಿದ್ಯಾಭ್ಯಾಸದ ಜೊತೆಗೆ ಒಳ್ಳೆಯ ಸಂಸ್ಕಾರದಿಂದ ಕೂಡಿದ ವಿದ್ಯಾ ಭ್ಯಾಸಗೈದು ಪೋಷಕರಿಗೆ  ಗೌರವ ತರುವಂಥಾಗಬೇಕು ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.
ಸರ್ಪ್ರೈಸ್ ಖಾನ್ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯು ಪರೀಕ್ಷೆಯಲ್ಲಿ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಬರೆಯುವುದರ ಮೂಲಕ ಪ್ರತಿಶತ ಅಂಕಗಳನ್ನು ಪಡೆಯುವುದಕ್ಕೆ ಪ್ರಯತ್ನಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರು ಮತ್ತು ಸಿಬ್ಬಂದಿ ವರ್ಗದವರು, ಶಾಲಾ ಮಕ್ಕಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *