ದಿಕ್ಕು ದೆಸೆ ಇಲ್ಲದ ಪ್ರಗತಿ ಶೂನ್ಯ ಬಜೆಟ್ ಸುಬೇದಾರ ಟೀಕೆ

ಶಹಾಪೂರ,,

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ ದಿಕ್ಕು ದೆಸೆ ಇಲ್ಲದ ಪ್ರಗತಿ ಶೂನ್ಯ ಬಜೆಟ್ ಆಗಿದ್ದು, ಸಾಲದ ಶೂಲಕ್ಕೆ ರಾಜ್ಯವನ್ನು ತೆಗೆದುಕೊಂಡು ಹೋಗುವ ಬಜೆಟ್ ಇದಾಗಿದೆ.ಇದರಿಂದ ರಾಜ್ಯದ ಹಣಕಾಸಿನ ಮೇಲೆ ದೂರಗಾಮಿ ಬಹಳ ದೊಡ್ಡ ಪರಿಣಾಮ ಬೀರಲಿದೆ ಎಂದು  ಬಿಜೆಪಿ ಯುವ ಮುಖಂಡ ಕರಣ ಸುಬೇದಾರ ಹೇಳಿದರು.ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾತನಾಡಿದ ಅವರು, 1.32 ಲಕ್ಷ ಕೋಟಿ ಸಾಲ ಮಾಡಿ ಸುಮಾರು 25 ಸಾವಿರ ಕೋಟಿ ರೂ. ಹೊಸ ತೆರಿಗೆ ಹಾಕಿ 22 ಸಾವಿರ ಕೋಟಿ ರೂ. ಕೊರತೆ ಬಜೆಟ್ ಮಂಡನೆ ಮಾಡಿದ್ದಾರೆ.ನೀರಾವರಿಗೆ ಕೇವಲ 22 ಸಾವಿರ ಕೋಟಿ ರೂ. ಮೀಸಲಿಟ್ಟಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆಗೆ 25 ಸಾವಿರ ಕೋಟಿ ರೂ. ಮೀಸಲಿಡಬೇಕಿತ್ತು. ಆದರೆ, ಯಾವುದೇ ಅನುದಾನ ಮೀಸಲಿಟ್ಟಿಲ್ಲ. ಆರೋಗ್ಯ, ಗ್ರಾಮೀಣಾಭಿವೃದ್ಧಿಗೆ ಅನುದಾನ ಕಡಿಮೆ ನೀಡಲಾಗಿದೆ ಎಂದರು.ದಿಕ್ಕು ದೆಸೆ ಇಲ್ಲದ ಪ್ರಗತಿ ಶೂನ್ಯ, ಸಾಲದ ಶೂಲಕ್ಕೆ ರಾಜ್ಯವನ್ನು ತಳ್ಳಲಾಗಿದೆ.ಇದರಿಂದ ರಾಜ್ಯದ ಹಣಕಾಸಿನ ಮೇಲೆ ಬಹು ದೊಡ್ಡ ಪರಿಣಾಮ ಬೀರಲಿದೆ. ರಾಜ್ಯವನ್ನು ಹತ್ತರಿಂದ 15 ವರ್ಷ ಹಿಂದೆ ತೆಗೆದುಕೊಂಡು ಹೋಗುತ್ತದೆ. ಇದರಿಂದ ನಿರಾಸೆಯಾಗಿದೆ. 17 ಬಾರಿ ಬಜೆಟ್ ಮಂಡನೆ ಮಾಡಿರುವ ಸಿಎಂರಿಂದ ಇದನ್ನು ನಿರೀಕ್ಷೆ ಮಾಡಿರಲಿಲ್ಲ ಎಂದರು.

Leave a Reply

Your email address will not be published. Required fields are marked *