ನಿರಂತರ ಓದು ವಿದ್ಯಾರ್ಥಿಗಳನ್ನು ಪರಿಪೂರ್ಣವಾಗಿ ಮಾಡುತ್ತದೆ : ದೇವೇಂದ್ರಪ್ಪ ಮೇಟಿ

ಶಹಾಪುರ,

ಇಂದಿನ ವಿದ್ಯಾರ್ಥಿಗಳು ಭವಿಷ್ಯದ ನಾಯಕರು. ಉತ್ತಮ ಶಿಕ್ಷಣ ಪಡೆದು ದೇಶ ಸೇವೆಗೆ ಮುಂದಾಗಿ. ನಿರಂತರ ಓದು ವಿದ್ಯಾರ್ಥಿಗಳನ್ನು ಪರಿಪೂರ್ಣವಾಗಿ ಮಾಡುತ್ತದೆ ಎಂದು ಡಿಡಿಯು ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ದೇವೇಂದ್ರಪ್ಪ ಮೇಟಿ ಹೇಳಿದರು. ತಾಲೂಕಿನ ಡಿಡಿಯು ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು. 10ನೇ ತರಗತಿಯ ಹಂತವು ಜೀವನದಲ್ಲಿ ಪ್ರಮುಖ ಹಂತವಾಗಿದೆ. ಆತಂಕವಿಲ್ಲದೆ ಪರೀಕ್ಷೆ ಎದುರಿಸಿ. ನಮ್ಮ ಸಂಸ್ಥೆಯು ವಿದ್ಯಾರ್ಥಿಗಳ ಪ್ರೇರಣೆಗಾಗಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಆಸಕ್ತಿಯಿಂದ ವಿದ್ಯಾಭ್ಯಾಸ ಮಾಡಿ. ಸಮಯ ವ್ಯರ್ಥ ಮಾಡಬೇಡಿ. ಉತ್ತಮ ಫಲಿತಾಂಶ ತರುವುದರಿಂದ ತಂದೆ ತಾಯಿ ಮತ್ತು ಸಂಸ್ಥೆಗೆ ಕೀರ್ತಿ ತರುವಂತಹ ಕೆಲಸ ಮಾಡಬೇಕೆಂದು ಕಿವಿಮಾತು ಹೇಳಿದರು. ಶಾಲಾ ವಿದ್ಯಾರ್ಥಿಗಳು ಮುಖ್ಯ ಗುರುಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *