ಮಕ್ಕಳ ಕ್ರಿಯಾಶೀಲತೆಗೆ ಸಾಕ್ಷಿಯಾದ ವಿಜ್ಞಾನ ವಸ್ತು ಪ್ರದರ್ಶನ

ಶಹಾಪುರ,,
ಪಠ್ಯ ಪುಸ್ತಕಗಳನ್ನು ಓದಿ ಪರೀಕ್ಷೆ ಬರೆಯುವುದಕ್ಕೆ ಸೀಮಿತಗೊಳಿಸದೆ, ಮಕ್ಕಳಲ್ಲಿನ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸುವುದು ಮುಖ್ಯ ಎಂದು ಯುವ ವಕೀಲ ಮದಕರಿ ನಾಯಕ ತಿಳಿಸಿದರು.
           ನಗರದ ಜ್ಞಾನಗಂಗಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ವಿಜ್ಞಾನ ವಸ್ತುಪ್ರದರ್ಶನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಚನಾತ್ಮಕ ಹಾಗೂ ಗುಣಾತ್ಮಕ ಶಿಕ್ಷಣ ದೊರೆಯಬೇಕಾದರೆ ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದು ಅಗತ್ಯ. ಈ ಕಾರಣದಿಂದ ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಏರ್ಪಡಿಸಿರುವುದು ಶ್ಲಾಘನೀಯ ಎಂದು ತಿಳಿಸಿದರು.
             ಜ್ಞಾನಜ್ಯೋತಿ ಶಾಲೆಯ ಮುಖ್ಯಸ್ಥ ಭೀಮಣ್ಣಗೌಡ, ರಾಮಚಂದ್ರ ಸಗರ, ತಿಪ್ಪಣ್ಣ ಖ್ಯಾತನಾಳ, ಮಲ್ಲಿಕಾರ್ಜುನ ಆವಂಟಿ ಮಾತನಾಡಿದರು.ಸಂಸ್ಥೆಯ ಮುಖ್ಯಸ್ಥ ಸುಧಾಕರ ಕುಲ್ಕರ್ಣಿ ಪ್ರಾಸ್ತಾವಿಕವಾಗಿ ಮಾತನಾಡಿದರು.

Leave a Reply

Your email address will not be published. Required fields are marked *