ಸಮಯಕ್ಕೆ ಬಾರದ ಅಧಿಕಾರಿಗಳು ಕ್ರಮಕ್ಕೆ ದಸಂಸ ಆಗ್ರಹ

ಶಹಾಪುರ,,

ಸರ್ಕಾರಿ ಅಧಿಕಾರಿಗಳು ಸಾರ್ವಜನಿಕರ ಸಮಾಸ್ಯೆಗಳನ್ನು ಪರಿಹರಿಸಿ ಕೊಡಬೇಕು. ಜನರ ಸೇವೆಯೆ ಅವರ ಮುಖ್ಯ ಉದ್ದೇಶ. ಆದರೆ ತಾಲ್ಲೂಕು ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ಕಚೇರಿಯಲ್ಲಿ ಅಧಿಕಾರಿಗಳು ಸರಿಯಾದ ಸಮಯಕ್ಕೆ ಬಾರದೆ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಅಡ್ಡಿಪಡಿಸುತ್ತಿದ್ದಾರೆ ಎಂದು ರಾಜ್ಯ ದಲಿತ ಸಂಘರ್ಷ ಸಮಿತಿಯ ತಾಲೂಕು ಸಂಚಾಲಕರಾದ ಹನುಮಂತ ಗಬ್ಬೂರು ಆರೋಪಿಸಿದ್ದಾರೆ. ಸೋಮವಾರ ಮನವಿ ಪತ್ರ ಸಲ್ಲಿಸಿದ ಅವರು, ಸ್ಥಳೀಯವಾಗಿ ಇರಬೇಕಾದ ಅಧಿಕಾರಿಗಳು ಕಚೇರಿಯ ಸಮಯದಲ್ಲಿ ಇರುವುದಿಲ್ಲ. ಸಮಸ್ಯೆಗಳನ್ನು ತೆಗೆದುಕೊಂಡು ಬಂದ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸುವವರು ಯಾರು. ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡದೆ ನಿಸ್ಕಾಳಜಿ ತೋರಿಸುತ್ತಿದ್ದಾರೆ. ಬೇಕಾಬಿಟ್ಟಿಯಾಗಿ ಬಿಲ್ಲುಗಳನ್ನು ಪಾವತಿ ಮಾಡುತ್ತಿದ್ದಾರೆ. ಸರ್ಕಾರದ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಆದ್ದರಿಂದ ಅಧಿಕಾರಿಗಳು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಬಿಲ್ ಗಳನ್ನು ಪಾವತಿ ಮಾಡಬೇಕೆಂದು ತಿಳಿಸಿದರು. ಇಲ್ಲದಿದ್ದರೆ ಕಚೇರಿಯ ಮುಂದೆ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು.ಈ ಸಂದರ್ಭದಲ್ಲಿ ಸುಂದರ ರಸ್ತಾಪುರ, ಹೊನ್ನಪ್ಪ ನಾಟೇಕರ, ಭೀಮರಾಯ ಸಾವೂರ ಸೇರಿದಂತೆ ಇತರರು ಇದ್ದರು.

Leave a Reply

Your email address will not be published. Required fields are marked *