ಹಜ್ ಭವನ ನಿರ್ಮಾಣ ರಾಜ್ ಮೈನುದ್ದಿನ್ ಸಂತಸ 

ಯಾದಗಿರಿ: ಕಲ್ಬುರ್ಗಿ ಮತ್ತು ಹುಬ್ಬಳ್ಳಿ-ಧಾರವಾಡಗಳಲ್ಲಿ ಹಜ್ ಭವನ ಮಂಜೂರು ಮಾಡಿದ ರಾಜ್ಯ ಸರ್ಕಾರದ ಕಾರ್ಯಕ್ಕೆ ಕೆಪಿಸಿಸಿ ರಾಜ್ಯ ಸಂಯೋಜಕ ರಾಜ್ ಮೈನುದ್ದಿನ್ ಜಮಾದಾರ ಹರ್ಷ ವ್ಯಕ್ತಪಡಿಸಿದ್ದಾರೆ.ಪತ್ರಿಕಾ ಹೇಳಿಕೆ ನೀಡಿದ ಅವರು, ಸರ್ಕಾರದ ಈ ನಿರ್ಧಾರದಿಂದ ಉತ್ತರ ಕರ್ನಾಟಕದ ಜನರ ಸಮಸ್ಯೆಗೆ ಸ್ಪಂದಿಸಿದಂತಾಗಿದ್ದು,ಪಕ್ಷದ ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲಿಮ್ ಅಹ್ಮದ್ ಅವರಿಗೆ ಅಭಿನಂದನೆ ಸಲ್ಲುತ್ತದೆ ಎಂದು ತಿಳಿಸಿದ್ದಾರೆ.

ಈ ಮೊದಲು ಹಜ್ ಯಾತ್ರಿಗಳು ಬೆಂಗಳೂರಿಗೆ ಹೋಗಬೇಕಾಗುತ್ತಿತ್ತು. ಆದರೆ ಈಗ ಹುಬ್ಬಳ್ಳಿ ಧಾರವಾಡ ಅವಳಿ ನಗರಗಳು ಹಾಗೂ ಕಲ್ಯಾಣ ಕರ್ನಾಟಕದ ಕಲ್ಬುರ್ಗಿಯಲ್ಲಿ ಹಜ್ ಭವನ ಮಾಡಿಸುವಲ್ಲಿ ಯಶಸ್ವಿಯಾಗಿರುವುದು ಈ ಭಾಗದ ಅಲ್ಪಸಂಖ್ಯಾತರ ಮುಸ್ಲಿಮ್ ಸಮುದಾಯಕ್ಕೆ ಸಂತಸ ತಂದಿದೆ ಎಂದು ಹೇಳಿದ್ದಾರೆ.