ಹೋರಾಟದ ಫಲ ಪದವಿ ಪೂರ್ವ ಕಾಲೇಜು ಮಂಜೂರು ಹರ್ಷ

ಶಹಾಪುರ,,

ಹಲವು ದಿನಗಳ ಹೋರಾಟದ ಫಲ, ಶಹಪುರ ತಾಲೂಕಿನ ಯಾದಗಿರಿ ಮತಕ್ಷೇತ್ರದ ದೋರನಹಳ್ಳಿ ಗ್ರಾಮಕ್ಕೆ ಪ್ರೌಢಶಾಲೆಯನ್ನು ಉನ್ನತೀಕರಿಸಿ ಪದವಿ ಪೂರ್ವ ಕಾಲೇಜನ್ನಾಗಿ ಮಂಜೂರು ಮಾಡಿರುವ ಸರ್ಕಾರದ ನಿರ್ಧಾರವನ್ನು ಕಾಂಗ್ರೆಸ್ ಮುಖಂಡ ನಿಜಗುಣ ದೋರನಹಳ್ಳಿಯವರು ಹರ್ಷ ವ್ಯಕ್ತಪಡಿಸಿದ್ದಾರೆ.

ದೋರನಹಳ್ಳಿ ಗ್ರಾಮವು ದೊಡ್ಡ ಗ್ರಾಮವಾಗಿದ್ದು, ಐದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳು,ಒಂದು ಪ್ರೌಢಶಾಲೆ ಇದೆ.600 ಕ್ಕೂ ಹೆಚ್ಚು ಮಕ್ಕಳು ಪ್ರೌಢ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಉನ್ನತ ವಿದ್ಯಾಭ್ಯಾಸಕ್ಕಾಗಿ ಶಹಪುರ, ಯಾದಗಿರಿ, ಸುರಪುರ ಇನ್ನಿತರ ಕಡೆ ಕಾಲೇಜು ವಿದ್ಯಾಭ್ಯಾಸಕ್ಕೆ ತೆರಳ್ಳುತ್ತಿದ್ದು ಮಕ್ಕಳಿಗೆ ಅನಾನುಕೂಲವಾಗುತ್ತಿತ್ತು.ಮಕ್ಕಳ ಸಂಖ್ಯೆಗನುಗುಣವಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜು ಮಂಜೂರು ಮಾಡಬೇಕೆಂದು ಸುಮಾರು ವರ್ಷಗಳಿಂದ ನಾವು ಹೋರಾಟವನ್ನು ಮಾಡಿಕೊಂಡು ಬಂದಿದ್ದೇವು.

ಯಾದಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ ಅವರು ವಿಶೇಷ ಕಾಳಜಿ ವಹಿಸಿ ಸಂಬಂಧ ಪಟ್ಟ ಸಚಿವರ ಮೇಲೆ ಒತ್ತಡವನ್ನು ಹಾಕಿ ನಮ್ಮ ಗ್ರಾಮಕ್ಕೆ ಸರ್ಕಾರಿ ಪ್ರೌಢ ಶಾಲೆಯನ್ನು ಪದವಿ ಪೂರ್ವ ಕಾಲೇಜನ್ನಾಗಿ ಉನ್ನತಿಕರಣ ಮಾಡಲು ಸರ್ಕಾರದಿಂದ ಆದೇಶ ಮಾಡಿಸಿದ್ದಾರೆ.ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್, ಯಾದಗಿರ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸ್ಸಪ್ಪಗೌಡ ದರ್ಶನಾಪೂರ, ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ,ಸಂಸದ ಜಿ ಕುಮಾರ ನಾಯಕ ಅವರು ಸಂಭಂಧ ಪಟ್ಟ ಸಚಿವರಿಗೆ ಪತ್ರ ಬರೆದು ಸಹಕಾರ ನೀಡಿದ್ದಾರೆ.ಆದ್ದರಿಂದ ದೋರನಹಳ್ಳಿ ಗ್ರಾಮದ ಜನತೆಯ ಪರವಾಗಿ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *