ಗ್ಯಾಸ್ ಡೋರ್ ಡೆಲಿವರಿ / ಪೆಟ್ರೋಲ್ ಡೀಸೆಲ್ ಕೊರತೆ ಇಲ್ಲ / ಊಹಾಪೋಹಗಳಿಗೆ ಕಿವಿಗೊಡಬೇಡಿ :: ಸೋಮಶೇಖರ ಬಿರಾದರ 

ಶಹಾಪುರ,,

ನಮ್ಮ ಅಂಕಿ ಅಂಶಗಳ ಪ್ರಕಾರ ಪೆಟ್ರೋಲ್ ಮತ್ತು ಡೀಸೆಲ್ ಸರಿಯಾದ ರೀತಿಯಲ್ಲಿ ಪೂರೈಕೆಯಾಗುತ್ತಿದೆ. ಸಾರ್ವಜನಿಕರು ಊಹಾಪೋಹದ ಸಂದೇಶಗಳಿಗೆ ಕಿವಿಗೊಡಬಾರದು ಎಂದು ಯಾದಗಿರಿ ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖಾ ಜಿಲ್ಲಾ ಉಪ ನಿರ್ದೇಶಕರಾದ ಸೋಮಶೇಖರ ಬಿರಾದರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಗ್ಯಾಸ್ ಸಿಲಿಂಡರ್ ಕೂಡ ಸಾರ್ವಜನಿಕರಿಗೆ ಸಿಗುವುದಿಲ್ಲ ಎನ್ನುವ ಭಯಬೇಡ. ಸಿಗುವುದಿಲ್ಲ ಎಂದು ಸಾರ್ವಜನಿಕರು ಸಂಗ್ರಹಿಸಿಟ್ಟು ಕೊಳ್ಳುತ್ತಿದ್ದಾರೆ.ವಾಣಿಜ್ಯ ಸಿಲಿಂಡರ್ ಕಡಿಮೆಯಾಗಿರುವುದರಿಂದ ಹೋಟೆಲ್ ದವರಿಗೆ ತೊಂದರೆಯಾಗಿದೆ. ಯಾದಗಿರಿ ಜಿಲ್ಲೆಗೆ ಪ್ರತಿದಿನ 6500 ಗ್ಯಾಸ್ ಸಿಲಿಂಡರ್ ಸರಬರಾಜು ಆಗುತ್ತಿದೆ.ಮಂಗಳವಾರದಂದು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲೆಯ ಗ್ಯಾಸ್ ಏಜೆನ್ಸಿಗಳ ಸಭೆ ನಡೆಸಿದ್ದು ಪ್ರತಿ ಮನೆ( ಡೋರ್) ಮನೆಗೆ ಗ್ಯಾಸ್ ಸಿಲಿಂಡರ್ ಗಳನ್ನು ತಲುಪಿಸುವ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

Leave a Reply

Your email address will not be published. Required fields are marked *