ಬಾಗಲಕೋಟೆ ಉಪ ಚುನಾವಣಾ ಉಸ್ತುವಾರಿಯಾಗಿ ರಂಗನಗೌಡ ದೇವಿಕೇರಿ ನೇಮಕ

ಯಾದಗಿರಿ:ಈಗಾಗಲೇ ಘೋಷಣೆಯಾಗಿರುವ ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಕೆಪಿಸಿಸಿ ಹಿಂದುಳಿದ ವಿಭಾಗದ ರಾಜ್ಯ ಕಾರ್ಯದರ್ಶಿ ರಂಗನಗೌಡ ಪಾಟೀಲ್ ದೇವಿಕೇರಿ ರವರನ್ನು ಚುನಾವಣಾ ಉಸ್ತುವಾರಿಯನ್ನಾಗಿ ನೇಮಕ ಮಾಡಿ ಆದೇಶಿಸಿದ್ದಾರೆ. ಕೆಪಿಸಿಸಿ ಹಿಂದುಳಿದ ವಿಭಾಗದ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಆದೇಶಿಸಿದ್ದು ಈ ಸಂದರ್ಭದಲ್ಲಿ ರಂಗನಗೌಡ ದೇವಿಕೇರಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರು ನನಗೆ ಚುನಾವಣಾ  ಜವಾಬ್ದಾರಿಯನ್ನು ನೀಡಿದ್ದು, ಬಾಗಲಕೋಟೆ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣೆ ಪ್ರಚಾರ ಕೈಗೊಂಡು ಸರ್ಕಾರದ ಸಾಧನೆಗಳನ್ನು ಮುಂದಿಟ್ಟುಕೊಂಡು ಪಕ್ಷದ ಪರ ಪ್ರಚಾರ ಮಾಡಿ ಹಿಂದುಳಿದ ವರ್ಗಗಳ ಮತಗಳನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *