ಶಹಾಪುರ,,
ಬಾಗಲಕೋಟೆ ಉಪ ಚುನಾವಣಾ ವೀಕ್ಷಕರಾಗಿ ಕೆಪಿಸಿಸಿ ಸಂಯೋಜಕರು ಹಾಗೂ ಕೆಪಿಸಿಸಿ ಕಿಸಾನ್ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜ್ ಮೈನುದ್ದಿನ್ ಎಂ. ಜಮಾದಾರ ಅವರನ್ನು ನೇಮಕ ಮಾಡಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ ಆದೇಶ ಹೊರಡಿಸಿದ್ದಾರೆ. ಬಾಗಲಕೋಟೆ ನಗರದ 47, 48, 49, 50, 51 ರ ವಾರ್ಡಗಳ ಜವಾಬ್ದಾರಿ ವಹಿಸಿದ್ದು ಪ್ರಚಾರದ ಉಸ್ತುವಾರಿ ನೋಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.ಇವರೊಂದಿಗೆ 5 ಜನ ಸಹಾಯಕ ವೀಕ್ಷಕರಾಗಿ ಕಾರ್ಯನಿರ್ವಹಣೆ ಮಾಡಲು ಆದೇಶ ನೀಡಲಾಗಿದೆ ಎಂದು ರಾಜ್ ಮೈನುದ್ದೀನ್ ತಿಳಿಸಿದ್ದಾರೆ.
ಜವಾಬ್ದಾರಿ ಹೆಚ್ಚಿದೆ ಎಂದ ರಾಜ್ ಮೈನುದ್ದೀನ್.
ಬಾಗಲಕೋಟೆ ಮತ್ತು ದಾವಣಗೆರೆ ಕ್ಷೇತ್ರಗಳು ಕಾಂಗ್ರೆಸ್ ಪಕ್ಷದ ಗೆಲುವಿಗಾಗಿ ಪಕ್ಷ ಪಣತೊಟ್ಟಿದ್ದು ಮೂರು ವರ್ಷಗಳ ಕಾಲ ರಾಜ್ಯದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು, ಗ್ಯಾರಂಟಿ ಯೋಜನೆಗಳು ಸರ್ಕಾರದ ಕೈಹಿಡಿಯಲಿವೆ ಎಂದು ರಾಜ್ ಮೈನುದ್ದೀನ್ ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆ, ಶಕ್ತಿ ಯೋಜನೆ,ಯುವನಿಧಿ ಯೋಜನೆಗಳು ಸರ್ಕಾರದ ಕೈಹಿಡಿಯಲಿವೆ. ಮಹಿಳೆಯರು ಕಾಂಗ್ರೆಸ್ ಪರದಿದ್ದಾರೆ. ಗ್ಯಾರಂಟಿ ಯೋಜನೆಗಳ ಜೊತೆಗೆ ಸರ್ಕಾರ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿವೆ. ಮೂರು ವರ್ಷಗಳ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸಮರ್ಥವಾಗಿ ಆಡಳಿತ ನಡೆಸಿದೆ. ಮತದಾರರು ಎರಡು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಕೈಹಿಡಿಯಲಿದ್ದು ಗೆಲುವು ನಮ್ಮದಾಗಲಿದೆ ಎಂದು ತಿಳಿಸಿದರು. ನನ್ನನ್ನು ಬಾಗಲಕೋಟೆ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷದ ಪರ ಪ್ರಚಾರ ಕೈಗೊಂಡು ಅಭ್ಯರ್ಥಿಯ ಪರ ಗೆಲುವಿಗಾಗಿ ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಡಿಕೆ ಶಿವಕುಮಾರ್, ಕಾರ್ಯಾಧ್ಯಕ್ಷರಾದ ಚಂದ್ರಶೇಖರ ಅವರು ಜವಾಬ್ದಾರಿ ನೀಡಿದ್ದು ಪಕ್ಷದ ಗೆಲುವಿಗಾಗಿ ಶ್ರಮಿಸುವುದಾಗಿ ತಿಳಿಸಿದರು.