ಶಹಾಪುರ,,
ಬಾಗಲಕೋಟೆ ಉಪಚುನಾವಣೆಯ ಪ್ರಚಾರ ಎಲ್ಲ ಪಕ್ಷಗಳಿಂದ ಮತಯಾಚನೆ ಭರ್ಜರಿಯಾಗಿ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷದಿಂದ ದಿ.ಎಚ್ ವೈ ಮೇಟಿ ಮಗನಾದ ಉಮೇಶ ಮೇಟಿಯವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದು ಪಕ್ಷದ ಪರ ಕಾಂಗ್ರೆಸ್ ಯುವ ಘಟಕದ ರಾಜ್ಯ ಉಪಾಧ್ಯಕ್ಷ ನಿಖಿಲ್ ವಿ ಶಂಕರ ಕ್ಷೇತ್ರದಲ್ಲಿ ಮತಯಾಚನೆಯಲ್ಲಿ ತೊಡಗಿದ್ದು ಬೂತ್ ಮಟ್ಟದಿಂದ ಹಿಡಿದು ಕ್ಷೇತ್ರದಾಂದ್ಯಂತ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವಂತೆ ಉಮೇಶ ಮೇಟಿ ಯವರ ಗೆಲುವಿಗಾಗಿ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷ ರಾಜ್ಯಾದ್ಯಂತ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು, ದೇಶದ ಇತಿಹಾಸದಲ್ಲಿಯೇ ಐದು ಗ್ಯಾರಂಟಿ ಯೋಜನೆಗಳನ್ನು ನಮ್ಮ ರಾಜ್ಯದಲ್ಲಿ ಜಾರಿಗೆ ತಂದಿದ್ದೇವೆ.ಮಹಿಳೆಯರ ಫಲಾನುಭವಿಗಳ ಖಾತೆಗೆ ಎರಡು ಸಾವಿರ ರೂಪಾಯಿ ಹಣವನ್ನು ಗೃಹಲಕ್ಷ್ಮಿ ಯೋಜನೆಯಲ್ಲಿ ಪ್ರತಿ ತಿಂಗಳಿಗೆ ಸರ್ಕಾರ ನೀಡುತ್ತಿದೆ. ಶಕ್ತಿ ಯೋಜನೆಯಡಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣ ಒದಗಿಸಿಕೊಟ್ಟಿದೆ.ಯುವನಿದಿ ಸೇರಿದಂತೆ ಉಚಿತ ಎರಡು ನೂರು ಯುನೀಟ್ ವಿದ್ಯುತ್ತನ್ನು ನೀಡಲಾಗಿದ್ದು, ಗ್ಯಾರೆಂಟಿ ಯೋಜನೆಗಳ ಜೊತೆಗೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಸರ್ಕಾರ ಮಾಡಿದೆ. ಬಡವರ ಶೋಷಿತರ ಪರ ಯಾವತ್ತೂ ಕಾಂಗ್ರೆಸ್ ಪಕ್ಷವಿದ್ದು ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ, ಪಕ್ಷದ ಅಭ್ಯರ್ಥಿಯಾದ ಉಮೇಶ್ ಭೇಟಿಯವರಿಗೆ ಮತ ಚಲಾಯಿಸುವಂತೆ ಮತದಾರರಲ್ಲಿ ನಿಖಿಲ್ ಶಂಕರ್ ರವರು ಕಾಂಗ್ರೆಸ್ ಪಕ್ಷದ ಪರ ಮತಯಾಚಿಸಿದರು.

ಯುವ ನಾಯಕರಾದ ನಿಖಿಲ್ ಶಂಕರ್ ಅವರು ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಶೋಷಿತರ ಬಡವರಿಗೆ ದಾನ ಧರ್ಮ ಮಾಡಿದ್ದು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಧನ ಸಹಾಯ ಮಾಡಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರ ಧಾರ್ಮಿಕ ಮುಖಂಡರ ಪ್ರತಿಮೆಗಳಿಗೆ ಧನಸಹಾಯ ಮಾಡಿ ಮೂರ್ತಿಗಳ ಪ್ರತಿಷ್ಠಾಪನೆಗೆ ಸಹಾಯ ಮಾಡಿದ್ದಾರೆ. ಬಡ ಮಕ್ಕಳಿಗೆ ಹಾಸ್ಟೆಲ್ ವ್ಯವಸ್ಥೆಯಲ್ಲಿ ಮೂಲಭೂತ ಸೌಕರ್ಯಗಳನ್ನು ರಾಜ್ಯಾದ್ಯಂತ ಒದಗಿಸಿ ಕೊಟ್ಟಿದ್ದಾರೆ. ನಿಖಿಲ್ ಶಂಕರ್ ರವರ ಹೃದಯ ಅಂತರಾಳದಲ್ಲಿ ಬಡವರ ಬಗ್ಗೆ ಅಪಾರ ಕಾಳಜಿ ಇದ್ದು ಬಾಗಲಕೋಟೆ ಉಪಚುನಾವಣೆಯಲ್ಲಿಯೂ ಕೂಡ ಮತದಾರರನ್ನು ಮನ ಹೋಲಿಸಿ ಕಾಂಗ್ರೆಸ್ ಪಕ್ಷದ ಪರ ಮತ ಚಲಾಯಿಸುವಂತೆ ಪ್ರಚಾರ ಕೈಗೊಂಡಿದ್ದು ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ ಎಂದಿದ್ದಾರೆ.

