ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಪರ ಭರ್ಜರಿ ಪ್ರಚಾರ ಕೈಗೊಂಡ ಕೆಪಿಸಿಸಿ ರಾಜ್ಯ ಸಂಯೋಜಕ ರಾಜ್ ಮೈನುದ್ದೀನ್

ಯಾದಗಿರಿ,,

ಕರ್ನಾಟಕ ರಾಜ್ಯದ ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಗಳು ರಾಷ್ಟ್ರದ ಗಮನ ಸೆಳೆದಿವೆ. ರಾಜ್ಯದಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ ಎರಡು ಉಪಚುನಾವಣೆಯಲ್ಲಿ ಗೆಲುವು ಸಾಧಿಸಲೇಬೇಕು ಎನ್ನುವ ಛಲ ತೊಟ್ಟಿದ್ದು ಮುಖ್ಯಮಂತ್ರಿ,ಉಪಮುಖ್ಯಮಂತ್ರಿ ಸೇರಿದಂತೆ ಸಚಿವ ಸಂಪುಟದ ಬಹುತೇಕ ಸಚಿವರು ಶಾಸಕರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಎರಡು ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಯಾದಗಿರಿ ಜಿಲ್ಲೆಯ ಕೆಪಿಸಿಸಿ ರಾಜ್ಯ ಸಂಯೋಜಕರಾದ ರಾಜ್ ಮೈನುದ್ದೀನ್ ರವರು  ಬಾಗಲಕೋಟೆ ಉಪ ಚುನಾವಣೆಯ ಉಸ್ತುವಾರಿಯನ್ನಾಗಿ ಕಾಂಗ್ರೆಸ್ ಪಕ್ಷದ ಪರವಾಗಿ ನೇಮಕಗೊಂಡಿದ್ದು ಕ್ಷೇತ್ರದಾದ್ಯಂತ ಪ್ರತಿ ವಾರ್ಡುಗಳಲ್ಲೂ ಪಕ್ಷದ ಪರ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ.

ರಾಜ್ಯದ ಗಮನ ಸೆಳೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದ್ದು ನಮ್ಮ ಪಕ್ಷದ ಗ್ಯಾರಂಟಿ ಮತ್ತು ಅಭಿವೃದ್ಧಿ ಕಾರ್ಯಗಳು ಕಾಂಗ್ರೆಸ್ ಪಕ್ಷದ ಗೆಲುವಿಗೆ ಕಾರಣವಾಗಲಿವೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ರಾಜ್ ಮೈನುದ್ದೀನ್  ರಾಷ್ಟ್ರದಲ್ಲಿ ಪ್ರತಿಯೊಬ್ಬ ಮಹಿಳಾ ಫಲಾನುಭವಿಗೆ ಗ್ಯಾರಂಟಿ ಯೋಜನೆಯ ಗೃಹಲಕ್ಷ್ಮಿ ಯೋಜನೆಯಡಿ ಎರಡು ಸಾವಿರ ರೂಪಾಯಿಗಳು ನೇರವಾಗಿ ಮಹಿಳೆಯ ಬ್ಯಾಂಕ್ ಖಾತೆಗೆ ನೀಡಿದ್ದು ಕಾಂಗ್ರೆಸ್ ಸರ್ಕಾರ. ರಾಜ್ಯಾದ್ಯಂತ ಪ್ರತಿ ಮಹಿಳೆಯು ಉಚಿತವಾಗಿ ಓಡಾಡಲು ಕೆಎಸ್ಆರ್ಟಿಸಿ ಬಸ್ಗಳಲ್ಲಿ ಉಚಿತ ಸಂಚಾರ ಒದಗಿಸಿ ಕೊಟ್ಟಿದ್ದು ನಮ್ಮ ಪಕ್ಷ. ಬಡ ಜನರಿಗೆ ಅನುಕೂಲವಾಗಲೆಂದು ಎರಡು ನೂರು ವಿದ್ಯುತ್ ಯೂನಿಟ್ದಷ್ಟು ಸರ್ಕಾರ ಉಚಿತವಾಗಿ ನೀಡಿದೆ.

ಒಂದು ವರ್ಷದವರೆಗೆ ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಮೂರು ಸಾವಿರ ರೂಪಾಯಿ ಕಾಂಗ್ರೆಸ್ ಸರ್ಕಾರ ನೀಡುತ್ತಿದೆ. ಇಷ್ಟೆಲ್ಲ ಯೋಜನೆಗಳು ರಾಜ್ಯದ ಕಾಂಗ್ರೆಸ್ ಪಕ್ಷ ನೀಡುತ್ತಿದ್ದು, ಇದರ ಜೊತೆಗೆ ರಾಜ್ಯಾದ್ಯಂತ ಹಲವು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಜಾತಿ ಮತ ಬೇದವಿಲ್ಲದೆ ಎಲ್ಲಾ ಸಮುದಾಯಗಳನ್ನು ಒಗ್ಗೂಡಿಸಿಕೊಂಡು ಹೋಗುವ ಪಕ್ಷ ಇದ್ದರೆ ಅದು ಕಾಂಗ್ರೆಸ್ ಪಕ್ಷ. ಅಭಿವೃದ್ಧಿಪರ ಮತದಾರರು ಮತದಾನ ಮಾಡಲಿದ್ದು, ಬಾಗಲಕೋಟೆ ಮತ್ತು ದಾವಣಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ತಿಳಿಸಿದರು. ಬಾಗಲಕೋಟೆಯಲ್ಲಿ ನಾಲ್ಕೈದು ದಿನಗಳ ಕಾಲ ಪ್ರತಿ ವಾರ್ಡ್ಗಳಲ್ಲು ಭೇಟಿ ನೀಡಿ ಮತದಾರರ ಮನವೊಲಿಸಿ ಕಾಂಗ್ರೆಸ್ ಪಕ್ಷದ ಅಭಿವೃದ್ಧಿ ಕಾರ್ಯಗಳ ಬಗ್ಗೆ ತಿಳಿಸಿ ಮತದಾನ ಮಾಡುವಂತೆ ಪ್ರಚಾರ ಕೈಗೊಂಡಿದ್ದು ಪಕ್ಷದ ಗೆಲುವು ನಿಶ್ಚಿತ ಎಂದು ರಾಜ್ ಮೈನುದ್ದೀನ್ ತಿಳಿಸಿದ್ದಾರೆ.