ಬಾಗಲಕೋಟೆ/ದಾವಣಗೆರೆ ಉಪಚುನಾವಣೆ : ಕಾಂಗ್ರೆಸ್ ಪಕ್ಷಕ್ಕೆ 2028ರ ರಾಜ್ಯ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ !

ಬಸವರಾಜ ಕರೇಗಾರ

ಶಹಾಪುರ, 

ರಾಜ್ಯದಲ್ಲಿ ಬಾಗಲಕೋಟೆ ಮತ್ತು ದಾವಣಗೆರೆ ಉಪಚುನಾವಣೆ ನಡೆಯುತ್ತಿದ್ದು ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಯಾರು ಗೆಲ್ಲುತ್ತಾರೆ ಎನ್ನುವುದು ಕುತೂಹಲಕಾರದ ಸಂಗತಿ.

ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದು ಮೂರು ವರ್ಷ ಸಮೀಪಿಸುತ್ತಿದೆ. ಕೆಲವರು ಗ್ಯಾರಂಟಿ ಯೋಜನೆಗಳು ರಾಜ್ಯದ ಅಭಿವೃದ್ಧಿಗೆ ಮಾರಕ ಎಂದು ಹೇಳುತ್ತಿದ್ದಾರೆ. ಇನ್ನೂ ಕೆಲವರು ಗ್ಯಾರಂಟಿ ಯೋಜನೆಗಳು ಬಡವರ ಪಾಲಿಗೆ ವರದಾನವಾಗಿವೆ ಎಂದು ಹೇಳುತ್ತಿದ್ದಾರೆ. ಇವುಗಳಲ್ಲಿ ಯಾವುದು ಸತ್ಯ ಎಂಬುವುದು ಗೊತ್ತಾಗುತ್ತಿಲ್ಲ.

ರಾಜ್ಯದಲ್ಲಿ ಎರಡು ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದೆ. ಏಪ್ರಿಲ್ 9ರಂದು ನಡೆಯುವ ಉಪಚುನಾವಣೆಯಲ್ಲಿ ಮತದಾರರು ಮತದಾರ ಚಲಾಯಿಸಲಿದ್ದು ಯಾರ ಪರ ಮತ ಚಲಾಯಿಸುವರು, ಯಾರು ಗೆಲ್ಲುವವರು ಎನ್ನುವುದು ಕುತೂಹಲ. ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ಬಡವರ ಪರ ನಾವಿದ್ದೇವೆ ಎಂದು 2023ರಲ್ಲಿ ಚುನಾವಣೆ ಎದುರಿಸಿ ಗೆಲುವು ಸಾಧಿಸಿದ್ದಾರೆ.

2023ರ ಚುನಾವಣೆಯಲ್ಲಿ ಭರವಸೆ ಕೊಟ್ಟಂತೆ ಐದು ಗ್ಯಾರಂಟಿ ಯೋಜನೆಗಳನ್ನು ರಾಜ್ಯದಲ್ಲಿ ಜಾರಿಗೆ ತರಲಾಗಿದೆ. ಯುವ ನಿಧಿ, ಎರಡು ನೂರು ಯುನಿಟ್ ವಿದ್ಯುತ್ ಫ್ರೀ, ಮಹಿಳೆಯರಿಗೆ ಕೆಎಸ್ಆರ್ಟಿಸಿ ಬಸ್ಸುಗಳಲ್ಲಿ ರಾಜ್ಯಾದ್ಯಂತ ಉಚಿತ ಸಂಚಾರ, ಒಂದು ಬಡ ಬಿಪಿಎಲ್ ಕುಟುಂಬ ಮುಖ್ಯಸ್ಥ ಮಹಿಳೆಗೆ ಪ್ರತಿ ತಿಂಗಳು 2000 ರೂ. ಬ್ಯಾಂಕ್ ಖಾತೆಗೆ ಜಮಾ. ಹೀಗೆ ಐದು ಯೋಜನೆಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದ್ದು ಪಕ್ಷ ಅಧಿಕಾರಕ್ಕೆ ಬಂದು ಮೂರು ವರ್ಷ ಸಮಿಪಿಸುತ್ತಿದೆ. ಮೂರು ವರ್ಷದ ನಂತರ ಮೊದಲ ಬಾರಿಗೆ ಬಾಗಲಕೋಟೆ ಮತ್ತು ದಾವಣಗೆರೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ನಿಧನರಾದ ಪರಿಣಾಮವಾಗಿ ಮತ್ತೊಮ್ಮೆ ಚುನಾವಣೆ ಎದುರಿಸುತ್ತಿದೆ.

ಮೂರು ವರ್ಷಗಳಲ್ಲಿ ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿ ಕಾರ್ಯಗಳು ಮಾಡಿದ್ದೇವೆ ಎಂದು ಕಾಂಗ್ರೆಸ್ ಪಕ್ಷ ಮತಯಾಚಿಸಿದರೆ, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಜಂಟಿಯಾಗಿ ಕೇಂದ್ರದಲ್ಲಿ ಬಿಜೆಪಿ ಪಕ್ಷ ಅಧಿಕಾರದಲ್ಲಿದ್ದು ಪ್ರಧಾನಿ ನರೇಂದ್ರಮೋದಿ ಅವರ ಪ್ರಭಾವ ಕೇಂದ್ರ ಸರ್ಕಾರದ ಅಭಿವೃದ್ಧಿ ಕೆಲಸಗಳು ಅದೇ ರೀತಿ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ ಎನ್ನುವ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಉಪಚುನಾವಣೆಯಲ್ಲಿ ಪ್ರಚಾರ ಕೈಗೊಂಡಿವೆ. ಯಾರು ಗೆಲ್ಲುತ್ತಾರೆ ಕುತೂಹಲ.

ಈ ಉಪ ಚುನಾವಣೆಯು 2028ರಲ್ಲಿ ರಾಜ್ಯದಲ್ಲಿ ನಡೆಯುವ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗುವುದು ಎಂದು ಹೇಳಲಾಗುತ್ತಿದೆ.2023 ರ ಚುನಾವಣೆಯಲ್ಲಿ ಮಹಿಳೆಯರಿಗೆ ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆಗಳಲ್ಲಿ ಹೆಚ್ಚು ಪ್ರಾಧಾನ್ಯತೆ ನೀಡಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಉಪಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಮಹಿಳೆಯರು ಕೈ ಬಿಡುವುದಿಲ್ಲ ಎನ್ನುವ ನಂಬಿಕೆ ಕಾಂಗ್ರೆಸ್ ಪಕ್ಷಕ್ಕಿದೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದರೆ 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗ್ಯಾರಂಟಿಗಳು ಶಕ್ತಿ ತುಂಬುತ್ತವೆ ಎನ್ನುವ ಬಲವಾದ ನಂಬಿಕೆ ಕಾಂಗ್ರೆಸ್ ಪಕ್ಷಕ್ಕಿದೆ.

ದಾವಣಗೆರೆ ಮತ್ತು ಬಾಗಲಕೋಟೆಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋತರೆ ಗ್ಯಾರಂಟಿ ಯೋಜನೆಗಳು ಮತ್ತು ಮಹಿಳೆಯರು ಪಕ್ಷವನ್ನು ತಿರಸ್ಕರಿಸಿದ್ದಾರೆ ಎಂದು ಅರಿತುಕೊಂಡು 2028ರ ಚುನಾವಣೆಗೆ ಕಾಂಗ್ರೆಸ್ ಪಕ್ಷವನ್ನು ಸಮರ್ಥವಾಗಿ ಕಟ್ಟಬೇಕಾಗುತ್ತದೆ. ಗ್ಯಾರಂಟಿ ಯೋಜನೆಗಳ ಜೊತೆಗೆ ಪಕ್ಷದ ಗೆಲುವಿಗಾಗಿ ಯಾವ ಯೋಜನೆಗಳನ್ನು ರೂಪಿಸಬೇಕು ಎಂದು ಚಿಂತಿಸಬೇಕಾಗುತ್ತದೆ. ಆದ್ದರಿಂದ ಬಾಗಲಕೋಟೆ ಮತ್ತು ದಾವಣಗೆರೆಯ ಉಪಚುನಾವಣೆಗಳು ಕಾಂಗ್ರೆಸ್ ಪಕ್ಷಕ್ಕೆ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎನ್ನಲಾಗಿದೆ.ಮತದಾರ ಯಾರ ಕೈಹಿಡಿಯುತ್ತಾನೆ ಎನ್ನುವುದು ಮೇ 4 ಕ್ಕೆ ಪ್ರಕಟಗೊಳ್ಳುವ ಫಲಿತಾಂಶದ ಮೇಲೆ ನಿಂತಿದೆ. ಈ ಚುನಾವಣೆ 2028ರ ರಾಜ್ಯ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗುತ್ತಿದೆಯಾ ಎನ್ನುವುದು ಕುತೂಹಲಕಾರಿ ವಿಷಯ…

Leave a Reply

Your email address will not be published. Required fields are marked *