ಯಾದಗಿರಿ,,
ಬಾಗಲಕೋಟೆ ಮತ್ತು ದಾವಣಗೆರೆ ಕ್ಷೇತ್ರದ ಉಪಚುನಾವಣೆಯ ಮುಗಿದಿದ್ದು ಮೇ ನಾಲ್ಕರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಮತದಾರರು ಕಾಂಗ್ರೆಸ್ ಕೈಹಿಡಿಯಲಿದ್ದಾರೆ. ಮೂರು ವರ್ಷದಲ್ಲಿ ಐದು ಗ್ಯಾರಂಟಿಗಳನ್ನು ರಾಜ್ಯದ ಜನತೆಗೆ ಕೊಟ್ಟಿದ್ದೇವೆ. ಗ್ಯಾರಂಟಿ ಯೋಜನೆಗಳ ಜೊತೆಗೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದ್ದು, ಬಡವರ ಪಕ್ಷ ಕಾಂಗ್ರೆಸ್ ಪಕ್ಷವನ್ನು ಯಾವತ್ತೂ ಜನರು ಕೈಬಿಡುವುದಿಲ್ಲ. ಎರಡು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ರಾಜ್ಯ ಕೆಪಿಸಿಸಿ ರಾಜ್ಯ ಸಂಯೋಜಕರಾದ ರಾಜ್ ಮೈನುದ್ದೀನ್ ಜಮಾದಾರ್ ದೋರನಹಳ್ಳಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು ನನ್ನನ್ನು ಬಾಗಲಕೋಟೆ ಮತಕ್ಷೇತ್ರದ ನಾಲ್ಕು ಬೂತುಗಳಲ್ಲಿ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿತ್ತು. ಚುನಾವಣಾ ಸಂದರ್ಭದಲ್ಲಿ ಮತದಾರರು ಪಂಚ ಗ್ಯಾರಂಟಿ ಯೋಜನೆಗಳನ್ನು ನೆನಪಿಸಿ ಮಾಡಿ ಕೊಟ್ಟಿದ್ದರೆ. ವಿಶೇಷವಾಗಿ ಮಹಿಳೆಯರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಿದ್ದು, ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರು ಒಳ್ಳೆಯ ಆಡಳಿತ ನಡೆಸುತ್ತಿದ್ದು ಅಲ್ಪಸಂಖ್ಯಾತರು ಕೂಡಾ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕೈಹಿಡಿಯಲಿದ್ದಾರೆ ಎಂದು ತಿಳಿಸಿದರು.ಮತದಾರರು ಕಾಂಗ್ರೆಸ್ ಪಕ್ಷವನ್ನು ಕೈ ಬಿಡುವುದಿಲ್ಲ. ಕಾಂಗ್ರೆಸ್ ಎರಡು ಕ್ಷೇತ್ರದಲ್ಲಿ ಗೆದ್ದೇ ಗೆಲ್ಲುತ್ತದೆ ಎನ್ನುವ ವಿಶ್ವಾಸ ನಮಗಿದೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.