ಬಸವರಾಜ ಕರೇಗಾರ
ಧಾರವಾಡ,
ರಾಜ್ಯದಲ್ಲಿ ಎರಡು ಲಕ್ಷಕ್ಕೂ ಅಧಿಕ ಸರ್ಕಾರಿ ಹುದ್ದೆಗಳು ಖಾಲಿ ಇದ್ದು ಅವುಗಳನ್ನು ಆದಷ್ಟು ಬೇಗ ಭರ್ತಿ ಮಾಡಿಕೊಳ್ಳಬೇಕೆಂದು ವಿವಿಧ ವಿದ್ಯಾರ್ಥಿಗಳ ಸಂಘಟನೆಗಳು ಧಾರವಾಡದಲ್ಲಿ ಎರಡನೇ ಸುತ್ತಿನ ಪ್ರತಿಭಟನೆ ನಡೆಸಿದರು. ಹೈಕೋರ್ಟ್ ಆದೇಶದಂತೆ ಒಂದು ನೂರಕ್ಕೂ ಹೆಚ್ಚು ಜನರು ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಷರತ್ತು ಬದ್ಧ ಆದೇಶ ಮಾಡಲಾಗಿತ್ತು. ಪ್ರತಿಭಟನೆ ನಡೆಯುವ ಸಂದರ್ಭದಲ್ಲಿ ರೈತ ಸಂಘ ಸೇರಿದಂತೆ ಇತರ ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡ ಪರಿಣಾಮ ಗಲಭೆ ಆಗುವ ಸಂದರ್ಭವನ್ನರಿತ ಪೊಲೀಸರು ಪ್ರತಿಭಟನಾಕಾರರನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದರಿಂದ ಪ್ರತಿಭಟನಾಕಾರರು ಕಿಡಿ ಕಾರಿದ್ದಾರೆ.
ನೌಕರಿಗಾಗಿ ಪ್ರತಿಭಟನೆ ಮಾಡುತ್ತಿದ್ದ ಉಧ್ಯೋಗ ಆಕಾಂಕ್ಷಿಗಳು ವಿವಿಧ ಸಂಘಟನೆಗಳ ವಿದ್ಯಾರ್ಥಿಗಳು ಮತ್ತು ಇತರ ಸಂಘಟನೆಗಳ ಮುಖಂಡರು ಕೇವಲ ರಾಜ್ಯ ಸರ್ಕಾರವನ್ನು ಮಾತ್ರ ಹೊಣೆಯಾಗಿಸುತ್ತಿದೆ. ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿಗಾಗಿ ಯಾಕೆ ಪ್ರತಿಭಟಿಸುತ್ತಿಲ್ಲ ಎನ್ನುವುದು ಸಾರ್ವಜನಿಕರಲ್ಲಿ ಸಂಶಯ ಮೂಡಲಾರಂಭಿಸಿದೆ. ಕೇಂದ್ರ ಸರ್ಕಾರದ ಹಲವು ಇಲಾಖೆಗಳಲ್ಲಿ ಕೇಂದ್ರ ಸರ್ಕಾರದಲ್ಲಿಯೂ ಕೂಡ ಹಲವು ಹುದ್ದೆಗಳು ಖಾಲಿ ಇವೆ. 2014ರಿಂದ ಇಲ್ಲಿಯವರೆಗೆ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರಕಾರ ಆಡಳಿತವಿದ್ದು ಪ್ರತಿವರ್ಷ ಎರಡು ಕೋಟಿ ಉದ್ಯೋಗ ಮಾಡಿಕೊಳ್ಳುವುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಚುನಾವಣಾ ಸಂದರ್ಭದಲ್ಲಿ ಭರವಸೆ ನೀಡಿದ್ದರು. 10 ವರ್ಷಕ್ಕಿಂತಲೂ ಹೆಚ್ಚು ದಿನಗಳಾದವು. ಇದುವರೆಗೂ ಉದ್ಯೋಗದ ಮಾತುಗಳನ್ನು ಕೇಂದ್ರ ಸರ್ಕಾರವು ಮಾತನಾಡುತ್ತಿಲ್ಲ. ಇದರ ಬಗ್ಗೆ ಪ್ರತಿಭಟನಾಕಾರರು ಯಾಕೆ ಕೇಂದ್ರ ಸರ್ಕಾರವನ್ನು ಪ್ರಶ್ನಿಸುತ್ತಿಲ್ಲ ಎನ್ನುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.
ದೇಶಾದ್ಯಂತ ಕೇಂದ್ರ ಸರ್ಕಾರದ ಹಲವು ಇಲಾಖೆಗಳಲ್ಲಿ ಖಾಲಿ ಹುದ್ದೆಗಳಿವೆ. ಇದರ ಬಗ್ಗೆ ಪ್ರತಿಭಟನೆಗಳು ನಡೆಯುತ್ತಿಲ್ಲ. ಕೇವಲ ರಾಜ್ಯ ಸರ್ಕಾರವನ್ನೇ ಆಧಾರವಾಗಿಟ್ಟುಕೊಂಡು ಪ್ರತಿಭಟನೆ ಮಾಡುವುದು ಸರಿಯಲ್ಲ ಎನ್ನುವುದು ಸಾರ್ವಜನಿಕರ ಅಭಿಪ್ರಾಯವಾಗಿದೆ.ಕೇಂದ್ರ ಸರ್ಕಾರವು ಕೂಡ ಹಲವು ಹುದ್ದೆಗಳನ್ನು ತುಂಬಿಕೊಳ್ಳುವುದು ಅವಶ್ಯಕವಾಗಿದೆ.ಇದರ ಬಗ್ಗೆ ವಿವಿಧ ಸಂಘಟನೆಯ ಮುಖಂಡರು ಯೋಚಿಸಬೇಕಿದೆ!!