ರಾಜ್ಯ ಪ್ರಶಸ್ತಿ ಪುರಸ್ಕೃತ ಮಲ್ಲಯ್ಯ ಪೋಲಂಪಲ್ಲಿ ಅವರಿಗೆ ಅಭಿನಂದನಾ ಸಮಾರಂಭ

ಶಹಾಪುರ,,

ಬೀದರ್ ನಲ್ಲಿ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 40 ನೇ ರಾಜ್ಯ ಸಮ್ಮೇಳನದಲ್ಲಿ ಪಟೇಲ್ ಬೈರ ಹನುಮಯ್ಯ ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತ ಮಲ್ಲಯ್ಯ ಪೋಲಂಪಲ್ಲಿ ಅವರಿಗೆ ಅಭಿನಂದನ ಸಮಾರಂಭ ನಾಳೆ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಆರ್ಯವೈಶ್ಯ ಮಹಾಸಭಾ ತಾಲೂಕ ಸಮಿತಿಯ ಅಧ್ಯಕ್ಷ ಗುಂಡಯ್ಯಶೆಟ್ಟಿ ಮುದುಗಲ್, ಕಾರ್ಯದರ್ಶಿ ರಾಘವೇಂದ್ರ ಚಾಗಿ ಜಂಟಿಯಾಗಿ ತಿಳಿಸಿದ್ದಾರೆ.

ನಗರದ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಏಪ್ರಿಲ್ 22 ರಂದು ಮಧ್ಯಾಹ್ನ 3:30ಕ್ಕೆ ಕರ್ನಾಟಕ ಆರ್ಯವೈಶ್ಯ ಮಹಾಸಭಾ ತಾಲೂಕ ಸಮಿತಿ, ವಾಸವಿ ಯುವಜನ ಸಂಘ ಹಾಗೂ ವಾಸವಿ ಮಹಿಳಾ ಮಂಡಳದ ಸಂಯುಕ್ತ ಆಶ್ರಯದಲ್ಲಿ ಅಭಿನಂದನ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಕುಲಬಾಂಧವರು, ಆತ್ಮೀಯರು ಹಾಗೂ ಹಿತೈಷಿಗಳು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಮಿತಿ ಹಾಗೂ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

.

 

 

Leave a Reply

Your email address will not be published. Required fields are marked *