ಶಹಾಪೂರ : ಏ.26 ರಿಂದ ಕೃಷಿ ಮತ್ತು ಗ್ರಾಮೀಣ ಕಾರ್ಮಿಕ ಸಂಘದ ರಾಜ್ಯ ಸಮ್ಮೇಳನ

ಶಹಾಪುರ,,

ಏಪ್ರೀಲ್ 26ರಿಂದ 28 ವರೆಗೆ ಶಹಾಪುರ ಸಿ.ಪಿ.ಎಸ್ ಶಾಲಾ ಮೈದಾನದಲ್ಲಿ ಕರ್ನಾಟಕ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ 9ನೇ ರಾಜ್ಯ ಸಮ್ಮೇಳನವು ದಿ.26 ರಿಂದ 28 ರವರೆಗೆ ನಡೆಯಲಿದ್ದು ಕಾರ್ಯಕ್ರಮ ಯಶಸ್ವಿಗೆ ಹೆಚ್ಚಿನ ಸಂಖ್ಯೆಯಲ್ಲಿ ರೈತರು,ಕಾರ್ಮಿಕರು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಕರ್ನಾಟಕ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ ಅಧ್ಯಕ್ಷ ಎಂ. ಪುಟ್ಟುಮಾಧು ಹೇಳಿದರು.ನಗರದ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿ ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಮಾಜಿ ರಾಜ್ಯ ಸಭಾ ಸದಸ್ಯರು, ನವದೆಹಲಿಯ ಅಖಿಲ ಭಾರತ ಕೃಷಿ ಕೂಲಿಕಾರರ ಸಂಘದ ಅಧ್ಯಕ್ಷ ಎ. ವಿಜಯರಾಘವನ್ ಬಹಿರಂಗ ಸಭೆ ಉದ್ಘಾಟಿಸಲಿದ್ದಾರೆ. ಅಖಿಲ ಭಾರತ ಕೃಷಿ ಕೂಲಿಕಾರರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ವೆಂಕಟ್, ಕೇರಳಂ ಜಂಟಿ ಕಾರ್ಯದರ್ಶಿ ವಿ. ಶಿವದಾಸನ್, ಬೆಂಗಳೂರು ಪ್ರಧಾನ ಕಾರ್ಯದರ್ಶಿ ಚಂದ್ರಪ್ಪ ಹೊಸ್ಕೇರ, ಸಿಐಟಿಯು ಪ್ರಧಾನ ಕಾರ್ಯದರ್ಶಿ ಎಸ್.ವರಲಕ್ಷ್ಮಿ, ರಾಜ್ಯಧ್ಯಕ್ಷ ಯು.ಬಸವರಾಜ, ರಾಜ್ಯ ಉಪಾಧ್ಯಕ್ಷ ಜಿ.ಎಸ್ ನಾಗರಾಜ, ಸ್ವಾಗತ ಸಮಿತಿ ಅಧ್ಯಕ್ಷ ಹಣಮೇಗೌಡ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು ಕಾರ್ಯಕ್ರಮ ಯಶಸ್ವಿಗೆ ಸಹಕರಿಸಬೇಕು ಎಂದರು.

ರಾಜ್ಯ ಸಮ್ಮೇಳನದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ ಪುನರ್ ಸ್ತಾಪನೆಗಾಗಿ ಮತ್ತು ವಿಬಿಜಿ ಗ್ರಾಮ್ ಜಿ ರದ್ದತಿಗಾಗಿ ಸಮ್ಮೆಳನದಲ್ಲಿ ಚರ್ಚೆ ನಡೆಯಲಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಸಮ್ಮೇಳನದಲ್ಲಿ ಸರ್ಕಾರದ ಗಮನಕ್ಕೆ ತಂದು ರೈತರ ಪೂರಕವಾದ ಆಡಳಿತ ನಡೆಸಲು ಸರ್ಕಾರ ಮುಂದಾಗಲು ಮನವಿ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಪ್ಪ ಹೊಸ್ಕೆರಾ, ರೈತ ಮುಖಂಡರಾದ ಚೆನ್ನಪ್ಪ ಆನೇಗುಂದಿ, ದಾವಲಾಸಾಬ್ ನದಾಫ್, ಎಸ್.ಎಂ ಸಾಗರ, ಭೀಮರಾಯ ಪೂಜಾರಿ ಸೇರಿದಂತೆ ಇತರರು ಇದ್ದರು.