ಟಿಪ್ಪರ್ ದ್ವಿಚಕ್ರ ವಾಹನ ಡಿಕ್ಕಿ : ಇಬ್ಬರು ಸ್ಥಳದಲ್ಲಿಯೆ ಮೃತ : ಇಬ್ಬರಿಗೆ ಗಂಭೀರ ಗಾಯ 

ರಾಯಚೂರು,,

ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಅತ್ತನೂರು ಗ್ರಾಮದಿಂದ ಶಾಖಾಪುರಕ್ಕೆ ಹೋಗುವ ಮಾರ್ಗ ಮಧ್ಯದಲ್ಲಿ ಟಿಪ್ಪರ್ ಮತ್ತು ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದು ಇನ್ನಿಬ್ಬರಿಗೆ ತೀವ್ರವಾದ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಅತ್ತನೂರಿನ ದಿಡ್ಡಿ ಬಸವೇಶ್ವರ ಜಾತ್ರೆಯ ರಥೋತ್ಸವ ಮುಗಿಸಿಕೊಂಡು ಶಾಖಾಪುರಕ್ಕೆ ಹೋಗುವ ಮಾರ್ಗದಲ್ಲಿ ಯುವಕನೂರ್ವ ಇಬ್ಬರು ಮಹಿಳೆಯರು ಮತ್ತು ಒಬ್ಬ ಬಾಲಕನನ್ನು ದ್ವಿಚಕ್ರ ವಾಹನದಲ್ಲಿ ಕುಳ್ಳಿರಿಸಿಕೊಂಡು ಗ್ರಾಮಕ್ಕೆ ತೆರಳುವಾಗ ಮಾರ್ಗ ಮಧ್ಯದಲ್ಲಿ ಟಿಪ್ಪರ್ ಗಾಡಿಗೆ ಡಿಕ್ಕಿ ಹೊಡೆದಿದ್ದು ಟಿಪ್ಪರ್ ಗಾಡಿಯ ಗಾಲಿಯೊಳಗೆ ದ್ವಿಚಕ್ರ ವಾಹನ ಉರುಳಿದ್ದು ದ್ವಿಚಕ್ರ ವಾಹನದಲ್ಲಿದ್ದ ಮಗುವೊಂದು ಗಾಡಿಯೊಳಗೆ ಸಿಕ್ಕಿಹಾಕಿಕೊಂಡು ಮೃತಪಟ್ಟಿದೆ. ಇನ್ನೋರ್ವ ವ್ಯಕ್ತಿ ಗಾಲಿಯೊಳಗೆ ಬಿದ್ದು ದೇಹ ತುಂಡಾಗಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇಬ್ಬರು ಮಹಿಳೆಯರಿಗೆ ಗಂಭೀರ ಗಾಯಗಳಾಗಿದ್ದು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *