ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ : ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರ ವಿಫಲ : ರಾಜ್ಯಗಳಿಗೆ ವಹಿಸುವಂತೆ  ಕೆಪಿಸಿಸಿ ಪದವೀಧರ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಕೃಷ್ಣಮೂರ್ತಿ ಆಗ್ರಹ 

ಕಲಬುರ್ಗಿ/ಯಾದಗಿರಿ,,

ವೈದ್ಯರಾಗಬೇಕೆಂಬ ಕನಸಿನೊಂದಿಗೆ ನೀಟ್ ಪರೀಕ್ಷೆಯನ್ನು ವಿದ್ಯಾರ್ಥಿಗಳು ಮೂರು ವರ್ಷಗಳ ಕಾಲ ಶ್ರಮಪಟ್ಟು ವ್ಯಾಸಂಗ ಮಾಡಿ ನೀಟ್ ಪರೀಕ್ಷೆ ಬರೆದು ಉತ್ತೀರ್ಣರಾದ ನಂತರ ವೈದ್ಯರಾಗುವ ಕನಸು ನನಸಾಗುತ್ತದೆ. ಆದರೆ ಪ್ರತಿ ವರ್ಷ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗುತ್ತದೆ.
ಬಿಜೆಪಿ ಆಡಳಿತವಿರುವ ರಾಜಸ್ಥಾನ, ಜಾರ್ಖಂಡ್, ಬಿಹಾರ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಮಾತ್ರ ಪ್ರಶ್ನೆಪತ್ರಿಕೆ ಸೋರಿಕೆಯಾಗುತ್ತಿದೆ ಏಕೆ ಎಂದು ಕೆಪಿಸಿಸಿ ಪದವೀಧರ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಕೃಷ್ಣಮೂರ್ತಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.2017 ರಿಂದ 2024 ರವರೆಗೆ ಕೇಂದ್ರ ಸರಕಾರ ಮಾಡುತ್ತಿರುವ ಸುಮಾರು 70 ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿವೆ.
NTA ಎಂದರೆ National testing agency ಯ ಮೂಲಕ ನೀಟ್ ಪರೀಕ್ಷೆ ನಡೆಸಲಾಗುವುದು. ಕಳೆದ 9 ವರ್ಷಗಳಲ್ಲಿ 4 ಬಾರಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ಇದರಿಂದಾಗಿ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯ ಬದಲು ನಾನ್ ಟ್ರಸ್ಟೇಬಲ್ ಏಜೆನ್ಸಿ ಅಂತಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಈ ವರ್ಷದಲ್ಲಿ ನೀಟ್ ಪರೀಕ್ಷೆಯಲ್ಲಿ ಪಾಸಾಗದಿದ್ದರೆ ಮುಂದಿನ ವರ್ಷದಲ್ಲಿ ಕೋಚಿಂಗ್ ಕ್ಲಾಸನಲ್ಲಿ ಹೆಚ್ಚಿನ ವ್ಯಾಸಂಗಪಡೆದು ಮುಂದಿನ ವರ್ಷವಾದರೂ ನೀಟ್ ಪರೀಕ್ಷೆಯಲ್ಲಿ ಪಾಸಾಗಿ ವೈದ್ಯರಾಗಬೇಕು ಎನ್ನುವ ಕನಸು  ಕಟ್ಟಿಕೊಂಡಿರುತ್ತಾರೆ.
 ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಕೇಂದ್ರ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದರ್ಥ. ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಜೊತೆ ಚೆಲ್ಲಾಟವಾಡುತ್ತಿದೆ. ಪ್ರತಿ ರಾಜ್ಯಗಳಲ್ಲಿ ನಡೆಯುವ ಸಿಇಟಿ ಪರೀಕ್ಷೆಗಳನ್ನು ಕಸಿದುಕೊಂಡು ದೇಶಾದ್ಯಂತ ಕೇಂದ್ರ ಸರ್ಕಾರ ನೀಟ್ ಪರೀಕ್ಷೆ ನಡೆಸಿ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುವ ಮೂಲಕ ಭ್ರಷ್ಟಾಚಾರಕ್ಕೆ ಕೈಜೋಡಿಸಿದೆ ಎಂದರು.
ಪ್ರಸ್ತುತ ಸಾಲಿನಲ್ಲಿ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ದೇಶಾದ್ಯಂತ ನೀಟ್ ಪರೀಕ್ಷೆ ಬರೆದಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನವಾಗಿದೆ. ಕರ್ನಾಟಕ ರಾಜ್ಯದಲ್ಲಿಯೇ 1.40 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಕೇಂದ್ರ ಸರ್ಕಾರದಿಂದ ಪರೀಕ್ಷೆ ನಡೆಸಲು ಆಗದಿದ್ದರೆ ಪ್ರತಿ ರಾಜ್ಯಗಳಿಗೆ ಪರೀಕ್ಷೆ ನಡೆಸುವ ಜವಾಬ್ದಾರಿ ವಹಿಸಿಕೊಡಿ. ಇದಕ್ಕಿಂತ ಪೂರ್ವದಲ್ಲಿ ಪ್ರತಿ ರಾಜ್ಯದಲ್ಲಿ ಸಿಇಟಿ ಪರೀಕ್ಷೆಯ ಮೂಲಕ ವೈದ್ಯಕೀಯ ಸೀಟುಗಳನ್ನು ಹಂಚಿಕೆ ಮಾಡಲಾಗುತ್ತಿತ್ತು. ಕೇಂದ್ರ ಸರ್ಕಾರ ಪ್ರತಿ ರಾಜ್ಯಗಳ ಕನಸನ್ನು ಕಸಿದುಕೊಂಡು ಮೋಸ ಮಾಡುತ್ತಿದೆ ಎಂದರು.
ಪ್ರತಿಯೊಂದು ವಿಷಯಕ್ಕೂ ರಾಜ್ಯದಲ್ಲಿರುವ ಸಂಘಟನೆಗಳು ರಾಜ್ಯ ಸರ್ಕಾರವನ್ನೇ ಹೊಣೆಯನ್ನಾಗಿ ಮಾಡುತ್ತಿವೆ. ಆದರೆ ಕೇಂದ್ರ ಸರ್ಕಾರ ನಡೆಸುತ್ತಿರುವ ನೀಟ್ ಪರೀಕ್ಷೆ ವಿರುದ್ಧ ವಿದ್ಯಾರ್ಥಿ ಸಂಘಟನೆಗಳು ಹೋರಾಟ ಮಾಡುವ ಸಮಯ ಒದಗಿ ಬಂದಿದೆ. ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಜೊತೆ ಆಟವಾಡುತ್ತಿದೆ. ಪ್ರತಿ ರಾಜ್ಯದಲ್ಲಿ ಸಿಇಟಿ ಪರೀಕ್ಷೆಯ ಮೂಲಕ ವೈದ್ಯಕೀಯ ಸೀಟುಗಳನ್ನು ಆಯ್ಕೆ ಮಾಡುವ ಅಧಿಕಾರ ರಾಜ್ಯಗಳಿಗೆ ಕೊಡಬೇಕು ಎಂದು ಪೋಷಕರನ್ನು ಒಳಗೊಂಡು ವಿದ್ಯಾರ್ಥಿ ಸಂಘಟನೆಗಳು ರಾಜ್ಯಾದ್ಯಂತ ಹೋರಾಟ ಮಾಡುವ ಅಗತ್ಯವಿದೆ. ಪ್ರತಿ ಸಂಘಟನೆಗಳು ಬೀದಿಗಿಳಿದು ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕಿದೆ ಎಂದು ಸಂಘಟನೆಗಳಿಗೆ ಕರೆ ನೀಡಿದರು.