ಜಿಲ್ಲಾ ಕಾಂಗ್ರೆಸ್ ಸಮಿತಿ ಪ.ಜಾ. ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಬಸವರಾಜ ನಾಯ್ಕಲ್

ಶಹಾಪುರ:ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ಯಾದಗಿರಿ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಬಸವರಾಜ ನಾಯ್ಕಲ್ ಅವರನ್ನು ಶಾಸಕ ಶರಣಬಸಪ್ಪ ಗೌಡ ದರ್ಶನಾಪುರ ಮತ್ತು ಪರಿಶಿಷ್ಟ ಜಾತಿ ವಿಭಾಗದ ಕಾಂಗ್ರೆಸ್ ಪಕ್ಷದ ರಾಜ್ಯ ಅಧ್ಯಕ್ಷರಾದ ಆರ್ ಧರ್ಮೇಂದ್ರ ಆದೇಶದಂತೆ ಪರಿಶಿಷ್ಟ ಜಾತಿಯ ಯಾದಗಿರಿ ಜಿಲ್ಲಾ ಅಧ್ಯಕ್ಷರಾದ ಮಲ್ಲಣ್ಣ ದಾಸನಕೇರಿ ಅವರು ನಿಷ್ಠಾವಂತ ಕಾರ್ಯಕರ್ತ 25 ವರ್ಷಗಳಿಂದ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡಿರುವುದನ್ನು ಗುರುತಿಸಿ ಪಕ್ಷದಲ್ಲಿ ಜವಾಬ್ದಾರಿ ನೀಡಿ ಪಕ್ಷ ಸಂಘಟನೆಗಾಗಿ ತಮ್ಮನ್ನು ತಾವು ತೊಡಗಿಸಿಕೊಂಡು ಕಾಂಗ್ರೆಸ್ ಪಕ್ಷವನ್ನು ಬಲಪಡಿಸಬೇಕು ಎಂಬ ಉದ್ದೇಶದಿಂದ ಬಸವರಾಜ್ ನಾಯ್ಕಲ್ ಅವರನ್ನು ಜಿಲ್ಲಾ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ನೀಡಿದ್ದಾರೆ.

ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಸೋನಿಯಾಗಾಂಧಿ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರ ನಾಯಕತ್ವ ಬಲಪಡಿಸುವ ಉದ್ದೇಶವನ್ನಿಟ್ಟುಕೊಂಡು,ರಾಜ್ಯ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾದ ಆರ್ ಧರ್ಮಸೇನಾ ಆದೇಶದ ಮೇರೆಗೆ ನೇಮಕ ಮಾಡಲಾಗಿದ್ದು, ತಕ್ಷಣದಿಂದಲೇ ಪಕ್ಷದ ಸಂಘಟನೆಗಾಗಿ ಕಾರ್ಯಪ್ರವೃತ್ತರಾಗಲು ಸೂಚಿಸಲಾಗಿದೆ ಎಂದು ಹೇಳಿದರು.

 

Leave a Reply

Your email address will not be published. Required fields are marked *