ಶಹಾಪೂರ,
ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ನೀಡಿದ್ದು ರಾಜ್ಯದಲ್ಲಿ ಸತತವಾಗಿ ಎಂಟು ವರ್ಷಗಳ ಕಾಲ ಒಳ್ಳೆಯ ಆಡಳಿತ ನೀಡಿದ್ದಾರೆ. ಶೋಷಿತರು ದೀನ ದಲಿತರನ್ನೊಳಗೊಂಡು ಎಲ್ಲಾ ವರ್ಗದ ಜನರನ್ನೊಳಗೊಂಡು ಸಮರ್ಪಕವಾದ ಆಡಳಿತ ನಡೆಸಿದ್ದು ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಮೇರೆಗೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಲಿರುವ ಡಿಕೆ ಶಿವಕುಮಾರ್ ಅವರಿಗೆ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳು ಮತ್ತು ಶರಣಬಸ್ಸಪ್ಪಗೌಡ ದರ್ಶನಾಪುರ್ ಅಭಿಮಾನಿ ಶಾಂತುಪಾಟೀಲ್ ಅವರು ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಇಲ್ಲಿಯ ತನಕ ಹಿಂದುಳಿದ ವರ್ಗಗಳು, ದಲಿತರು, ಅಲ್ಪಸಂಖ್ಯಾತರು ಹಾಗೂ ಎಲ್ಲಾ ವರ್ಗದ ಜನರು ಬೆಂಬಲವಾಗಿ ನಿಂತಿದ್ದಾರೆ. ಸಿದ್ದರಾಮಯ್ಯನವರಂತೆ ತಾವೂ ಕೂಡ ಎಲ್ಲಾ ಸಮಾಜಗಳನ್ನು ಜೊತೆಯಲ್ಲಿ ಕರೆದುಕೊಂಡು ಹೋಗಿ, ಧ್ವನಿಯಿಲ್ಲದ ಸಮಾಜಗಳ ಪರವಾಗಿ ಶ್ರಮಿಸಬೇಕು ಎಂಬುದು ನಮ್ಮ ಆಶಯ. ಸಿದ್ದರಾಮಯ್ಯನವರು ಎಂಟು ವರ್ಷಗಳ ಕಾಲ ಮುಖ್ಯಮಂತ್ರಿ ಸ್ಥಾನ ಹಾಗೂ ಎರಡು ಬಾರಿ ವಿರೋಧ ಪಕ್ಷದ ನಾಯಕ ಸ್ಥಾನ ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಚಿರಋಣಿಗಳಾಗಿದ್ದೇವೆ.
ಕಲ್ಯಾಣ ಕರ್ನಾಟಕ ಭಾಗದ ಜನರ ನಾಡಿಮಿಡಿತ ಅರಿತ ಸಚಿವ ಶರಣಬಸಪ್ಪಗೌಡ ದರ್ಶನಪುರವರಿಗೆ ಇನ್ನಷ್ಟು ಶಕ್ತಿ ನೀಡಿ, ಮುಂದಿನ ಎರಡು ವರ್ಷದ ಅವಧಿಯಲ್ಲಿ ಸಚಿವ ಖಾತೆಯ ಜೊತೆಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿ ರಾಜ್ಯದ ಜನರ ಸೇವೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದರು.