ಶಹಾಪುರ,,
ರಾಜ್ಯದಲ್ಲಿ ಸಮರ್ಥವಾಗಿ ಆಡಳಿತ ನಡೆಸಿದ ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿ ಆಗುತ್ತಿರುವುದು ಸಂತಸದ ವಿಚಾರ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ರಾಜ್ಯದ ಅಭಿವೃದ್ಧಿಗಾಗಿ ಶ್ರಮಿಸಲಿ ಎಂದು ಅಭಿನಂದನೆ ಸಲ್ಲಿಸುತ್ತೇನೆ ಎಂದು ಕಾಂಗ್ರೆಸ್ ಯುವ ಮುಖಂಡ ಮರ್ದಾನಿ ಸಲಾದಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಮೂರು ವರ್ಷಗಳಾದವು. ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪಗೌಡ ದರ್ಶನಪುರ ಅವರು ಮೂರು ವರ್ಷಗಳ ಕಾಲ ರಾಜ್ಯದಲ್ಲಿ ಸಮರ್ಥವಾಗಿ ಆಡಳಿತ ನಡೆಸಿದ್ದಾರೆ. ಕಾರ್ಯಕರ್ತರ ಸ್ಪಂದನೆಗೆ ಸ್ಪಂದಿಸುತ್ತಾ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸುತ್ತಾ ಕ್ಷೇತ್ರ ಮತ್ತು ರಾಜ್ಯಗಳಲ್ಲಿ ಹಲವು ಅಭಿವೃದ್ಧಿ ಕಾರ್ಯಗೈದಿದ್ದು ಮುಂದಿನ ದಿನಗಳಲ್ಲಿ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಬೇಕು. ಅಭಿವೃದ್ಧಿ ಹರಿಕಾರರಾದ ಸಚಿವ ದರ್ಶನಪುರ ಅವರು ಇನ್ನೂ ಎರಡು ವರ್ಷಗಳ ಕಾಲ ರಾಜ್ಯದಲ್ಲಿ. ಅಭಿವೃದ್ಧಿ ಕಾರ್ಯ ಮಾಡಲು ಉಪಮುಖ್ಯಮಂತ್ರಿ ಹುದ್ದೆ ನೋಡಬೇಕೆಂದು ಒತ್ತಾಯಿಸಿದರು.