ಶಹಾಪುರ: ಕರ್ನಾಟಕ ಚಾಲಕರ ಒಕ್ಕೂಟದ ನೇತೃತ್ವದಲ್ಲಿ ಶಹಾಪುರದಲ್ಲಿ ಪ್ರತಿಭಟನೆ ನಡೆಸಿ, ಶಾಸಕ ಹಾಗೂ ಮಾಜಿ ಸಚಿವ ಶರಣಬಸಪ್ಪ ಗೌಡ ದರ್ಶನಾಪುರ ಅವರಿಗೆ ಸಚಿವ ಸ್ಥಾನ ನೀಡುವಂತೆ ಮುಖ್ಯಮಂತ್ರಿ ಅವರಿಗೆ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.
ಒಕ್ಕೂಟದ ಜಿಲ್ಲಾ ಅಧ್ಯಕ್ಷ ಬಸವರಾಜ ಚಟ್ನಳ್ಳಿ ಮಾತನಾಡಿ, ದರ್ಶನಾಪುರ ಅವರು ಐದು ಬಾರಿ ಶಾಸಕರಾಗಿ, ಮೂರು ಬಾರಿ ಸಚಿವರಾಗಿ ಜನಸೇವೆ ಸಲ್ಲಿಸಿದ್ದು, ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಒತ್ತಾಯಿಸಿದರು.
ತಾಲೂಕು ಅಧ್ಯಕ್ಷ ಹೊನ್ನಪ್ಪ ಜಂಗಳಿ ಹಾಗೂ ಆಟೋ ಚಾಲಕರ ಒಕ್ಕೂಟದ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಸಾಂಗ್ಲಿಯಾನ ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ದರ್ಶನಾಪುರ ಅವರ ಕೊಡುಗೆ ಅಪಾರವಾಗಿದ್ದು, ಅವರಿಗೆ ತಕ್ಷಣ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.ಪ್ರತಿಭಟನೆಯಲ್ಲಿ ವಿವಿಧ ಚಾಲಕರ ಸಂಘಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.