ರಾಘವೇಂದ್ರ ಹಿಟ್ನಾಳ್ ಸಚಿವ ಸ್ಥಾನ ನೀಡುವಂತೆ ಕುರುಬ ಸಮಾಜದ ಮುಖಂಡರ ಮನವಿ

ಶಹಾಪುರ,

ರಾಜ್ಯ ಸಚಿವ ಸಂಪುಟದಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ್ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಉತ್ತರ ಕರ್ನಾಟಕದ ಕುರುಬ ಸಮಾಜಕ್ಕೆ ನ್ಯಾಯ ಒದಗಿಸಬೇಕು ಎಂದು ಶಹಾಪುರ ತಾಲೂಕಿನ ಕುರುಬ ಸಮಾಜದ ಮುಖಂಡರು ಆಗ್ರಹಿಸಿದ್ದಾರೆ.ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಿದ ಮುಖಂಡರು, ಉತ್ತರ ಕರ್ನಾಟಕ ಭಾಗದ ಕುರುಬ ಸಮಾಜದ ಶಾಸಕರನ್ನು ಕಡೆಗಣಿಸಬಾರದು ಎಂದು ಒತ್ತಾಯಿಸಿದ್ದಾರೆ.

ಶಾಸಕ ರಾಘವೇಂದ್ರ ಹಿಟ್ನಾಳ್ ಅವರು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಪಕ್ಷ ಸಂಘಟನೆ ಹಾಗೂ ಜನಸೇವೆಯಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಇಂತಹ ಹಿರಿಯ ಮತ್ತು ಅನುಭವಿ ನಾಯಕರಿಗೆ ಸಚಿವ ಸ್ಥಾನ ನೀಡಬೇಕು.ಸಚಿವ ಸಂಪುಟದಲ್ಲಿ ಅವಕಾಶ ಕಲ್ಪಿಸುವ ಮೂಲಕ ಸಮಾಜದ ಆಶೋತ್ತರಗಳಿಗೆ ಸ್ಪಂದಿಸಬೇಕು ಎಂದು ತಿಳಿಸಿದರು.ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಹೈಕಮಾಂಡಗೆ ಒತ್ತಾಯಿಸಿದವರು.

ಕುರುಬ ಸಮಾಜದ ಮುಖಂಡರಾದ ಯಮನಪ್ಪ ಅಗಸ್ತ್ಯಾಳ, ರಂಗನಗೌಡ ದೇವಿಕೇರಿ, ಶರಬಣ್ಣ ರಸ್ತಾಪುರ, ಸಿದ್ದಪ್ಪ ಕನ್ಯಕೊಳುರು, ಮಹೇಶ್ ರಸ್ತಪುರ ಸೇರಿದಂತೆ ತಾಲೂಕಿನ ಸಮಾಜದ ಮುಖಂಡರು ಇದ್ದರು.

Leave a Reply

Your email address will not be published. Required fields are marked *