ನೂತನ ಜಿಲ್ಲಾಧಿಕಾರಿಗೆ ಸನ್ಮಾನ – ದಲಿತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

ಯಾದಗಿರಿ,

ಸಮತ ಸೈನಿಕ ದಳ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಸಂಯೋಜಕ) ನೇತೃತ್ವದಲ್ಲಿ ನೂತನ ಜಿಲ್ಲಾಧಿಕಾರಿ ಪಾಂಡ್ವೆ ರಾಹುಲ್ ತುಕಾರಾಮ್ ಹಾಗೂ ಅಪರ ಜಿಲ್ಲಾಧಿಕಾರಿ ರಮೇಶ್ ಕೋಲಾರ ಅವರಿಗೆ ಸನ್ಮಾನಿಸಿ, ಜಿಲ್ಲೆಯ ದಲಿತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಮತ ಸೈನಿಕ ದಳ ಜಿಲ್ಲಾ ಅಧ್ಯಕ್ಷರು ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಸಂಯೋಜಕ) ಜಿಲ್ಲಾ ಸಂಯೋಜಕರಾದ ಹತ್ತಿಗೂಡೂರ್ ಶರಣರೆಡ್ಡಿ, ಯಾದಗಿರಿ ಜಿಲ್ಲೆಯ ದಲಿತರಿಗೆ ಭೂಮಿ, ವಸತಿ ನಿವೇಶನ, ಭೂ ಒಡೆತನ ಯೋಜನೆ ಸೇರಿದಂತೆ ಹಲವು ಮೂಲಭೂತ ಸೌಲಭ್ಯಗಳ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.ಕಳೆದ ಏಳು ತಿಂಗಳಿಂದ ನಿರಂತರ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಮತ್ತು ಜಿಲ್ಲಾಡಳಿತ ಸಮರ್ಪಕವಾಗಿ ಸ್ಪಂದಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಎಲ್ಲಾ ಬೇಡಿಕೆಗಳು ಈಡೇರುವವರೆಗೆ ಹೋರಾಟವನ್ನು ಮುಂದುವರಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.ಈ ಸಂದರ್ಭದಲ್ಲಿ ನಿಂಗಣ್ಣ ಕರಡಿ, ಶರಣಪ್ಪ ಚಲುವಾದಿ, ದೇವಪ್ಪ ಅನಸೂರ, ಹೈಯ್ಯಾಳಪ್ಪ ಸೋತೆನೋರ, ಶರಣಪ್ಪ ಸೋತೆನೋರ ಹಾಗೂ ಸಿದ್ದಪ್ಪ ಹೊಸಮನಿ ಸೇರಿದಂತೆ ಸಮಿತಿಯ ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *