ಶಹಾಪೂರ:
ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ಕೆಪಿಸಿಸಿ ಕಿಸಾನ್ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜ್ ಮೈನುದ್ದಿನ್ ಜಮಾದಾರ ದೋರನಳ್ಳಿ ತಿಳಿಸಿದ್ದಾರೆ.
ಬಿಜೆಪಿ ಗ್ಯಾರೆಂಟಿಗಳು ಬಂದ್ ಆಗುತ್ತವೆ ಎಂದು ಅಪಪ್ರಚಾರ ನಡೆಸುತ್ತಿದ್ದು, ಜನರು ಅದಕ್ಕೆ ಕಿವಿಗೊಡಬಾರದು ಎಂದು ಮನವಿ ಮಾಡಿದರು. ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸಲು ಹೊಸದಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದ್ದು, ಇದರಿಂದ ಯೋಜನೆಗಳು ರದ್ದಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಯೋಜನೆಗಳನ್ನು ಮುಂದುವರಿಸಲು ಬದ್ಧವಾಗಿದೆ ಎಂದು ಹೇಳಿಧರು.