ಯಾದಗಿರಿ: ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷರಾದ ರಘು ಕೌಟಿಲ್ಯ ಅವರು ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವುದು ಪಕ್ಷದ ಕಾರ್ಯಕರ್ತರಲ್ಲಿ ಹರ್ಷದ ವಾತಾವರಣ ಮೂಡಿಸಿದೆ.ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಶರಣಗೌಡ ಐಕೂರು ಅವರು ರಘು ಕೌಟಿಲ್ಯರಿಗೆ ಅಭಿನಂದನೆ ಸಲ್ಲಿಸಿ, ಅವರ ಆಯ್ಕೆಯು ಹಿಂದುಳಿದ ವರ್ಗಗಳ ಧ್ವನಿಯನ್ನು ಮತ್ತಷ್ಟು ಬಲಪಡಿಸುವುದರ ಜೊತೆಗೆ ಪಕ್ಷ ಸಂಘಟನೆಗೆ ಹೊಸ ಚೈತನ್ಯ ನೀಡಲಿದೆ ಎಂದು ಹೇಳಿದರು. ಬಿಜೆಪಿ ಒಬಿಸಿ ಮೋರ್ಚದ ಅಧ್ಯಕ್ಷರಾಗಿರುವ ಕೌಟಿಲ್ಯ ಅವರು ಪಕ್ಷ ಸಂಘಟನೆ ಹಾಗೂ ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಅವರ ಸೇವೆ ಮತ್ತು ನಾಯಕತ್ವವನ್ನು ಗುರುತಿಸಿ ವಿಧಾನಪರಿಷತ್ ಸದಸ್ಯರಾಗಿ ಬಿಜೆಪಿ ಹೈಕಮಾಂಡ್ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷರಾದ ವಿಜಯೇಂದ್ರ ಅವರು ವಿಧಾನ ಪರಿಷತ್ ಸ್ಥಾನಕ್ಕೆ ಆಯ್ಕೆ ಮಾಡಿದ್ದರು ಎಂದು ಶರಣಗೌಡ ಐಕೂರು ಮೆಚ್ಚುಗೆ ವ್ಯಕ್ತಪಡಿಸಿದರು.ಅವರ ಮುಂದಿನ ಸಾರ್ವಜನಿಕ ಹಾಗೂ ರಾಜಕೀಯ ಜೀವನ ಇನ್ನಷ್ಟು ಯಶಸ್ವಿಯಾಗಲಿ ಎಂದು ಹಾರೈಸಿದರು.