ನವದೆಹಲಿ: ನೀಟ್ (NEET) ಸೇರಿದಂತೆ ವಿವಿಧ ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ಖಂಡಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಆರನೇ ದಿನಕ್ಕೆ ಕಾಲಿಟ್ಟಿದೆ. ವಿದ್ಯಾರ್ಥಿಗಳು, ಯುವಕರು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಕುಂದಿಸಿವೆ.
ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟ ನಡೆಸಿರುವ ನೀಟ್ ಭ್ರಷ್ಟಾಚಾರದ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪಾರ್ಟಿಯಿಂದ ಲಕ್ಷಾನುಗಟ್ಟಲೆ ಜನರು ಪ್ರತಿಭಟನೆ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಈ ವಿಷಯದಲ್ಲಿ ಸ್ಪಷ್ಟ ಉತ್ತರ ನೀಡುತ್ತಿಲ್ಲ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡದೆ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ.
ದೇಶದ ವಿವಿಧ ರಾಜ್ಯಗಳ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಪ್ರಧಾನಿ, ಕೇಂದ್ರ ಮಟ್ಟದಲ್ಲೇ ನಡೆದಿರುವ ಪರೀಕ್ಷಾ ಅಕ್ರಮಗಳ ಬಗ್ಗೆ ಮೌನ ವಹಿಸಿರುವುದು ಜನರಲ್ಲಿ ಅನುಮಾನ ಮೂಡಿಸಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿರುವ ಹಲವು ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿರುವ ಆರೋಪಗಳು ಕೇಳಿಬರುತ್ತಿವೆ. ಇಂತಹ ಸಂದರ್ಭದಲ್ಲಿ ಭ್ರಷ್ಟಾಚಾರದ ವಿರುದ್ಧ ಮಾತನಾಡುವ ನೈತಿಕ ಅಧಿಕಾರ ಕೇಂದ್ರ ಸರ್ಕಾರಕ್ಕಿದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ.
ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆ ಉಂಟುಮಾಡುವ ಪರೀಕ್ಷಾ ಅಕ್ರಮಗಳನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು ಎಂದು ಅವರು ಒತ್ತಾಯಿಸಿದರು.
▶ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ದೇಶದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಹೊಡೆತ.
▶ ಜಂತರ್ ಮಂತರ್ ಪ್ರತಿಭಟನೆ ಆರನೇ ದಿನಕ್ಕೆ ಕಾಲಿಟ್ಟಿದೆ.
▶ ಕೇಂದ್ರ ಸರ್ಕಾರ ಸ್ಪಷ್ಟ ಉತ್ತರ ನೀಡಬೇಕು.
▶ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು.
▶ ಪರೀಕ್ಷಾ ಅಕ್ರಮಗಳ ಕುರಿತು ಪ್ರಧಾನಿ ಮೌನ ಸರಿಯಲ್ಲ.
▶ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.
ವಿದ್ಯಾರ್ಥಿಗಳ ಕನಸುಗಳ ಜೊತೆ ಆಟವಾಡುವ ಯಾವುದೇ ಅಕ್ರಮವನ್ನು ದೇಶ ಸಹಿಸುವುದಿಲ್ಲ.
– ನಿಂಗಣ್ಣ ನಾಟಿಕರ್…