ಶಹಾಪುರ:
ಹಿರಿಯ ಲೇಖಕಿ, ವಿಮರ್ಶಕಿ ಹಾಗೂ ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯೆಯಾಗಿದ್ದ ಡಾ. ಚಂದ್ರಕಲಾ ಬಿದರಿ ಅವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅವರ ಅಗಲಿಕೆಗೆ ಸಾಹಿತ್ಯ ವಲಯದ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಎಲ್. ಎನ್. ಮುಕುಂದರಾಜ್, ಎನ್. ಕರಿಯಪ್ಪ, ಸಾಹಿತ್ಯ ಅಕಾಡೆಮಿ ಸದಸ್ಯ ಹಾಗೂ ಲೇಖಕರಾದ ಡಾ. ಸಿದ್ಧರಾಮ ಹೊನ್ಕಲ್ ಸೇರಿದಂತೆ ಅಕಾಡೆಮಿಯ ಸದಸ್ಯರು, ಡಾ. ಗವಿಸಿದ್ಧ ಪಾಟೀಲ, ಡಾ. ಮುಕ್ತಾಂಬಿ ಹಾಗೂ ಡಾ. ರಾಘವೇಂದ್ರ ಹಾರನಗೇರಾ ಅವರು ಡಾ. ಚಂದ್ರಕಲಾ ಬಿದರಿ ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.
ಡಾ. ಚಂದ್ರಕಲಾ ಬಿದರಿ ಅವರು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರವಾಗಿದ್ದು, ಅವರ ಅಗಲಿಕೆಯಿಂದ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.