ಶಹಾಪುರ : ದೋರನಹಳ್ಳಿ ಗ್ರಾಮದಿಂದ ಇಬ್ರಾಂಪುರ್ ಗ್ರಾಮದ ಶ್ರೀ ಅಬ್ದುಲ್ ಭಾಷಾ ಮುತ್ಯನ ಕೆರೆಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರು, ರೈತರು ಹಾಗೂ ಭಕ್ತರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಶಹಾಪುರ ತಾಲೂಕು ಘಟಕ ಹಾಗೂ ಗ್ರಾಮಸ್ಥರು ಶಾಸಕರಿಗೆ ಮನವಿ ಸಲ್ಲಿಸಿದರು.
ಕರವೇ ತಾಲೂಕು ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ದೋರನಹಳ್ಳಿ ಮಾತನಾಡಿ, ರಸ್ತೆ ಅಗಲೀಕರಣ ಮಾಡಿ, ಗುಂಡಿಗಳನ್ನು ಮುಚ್ಚಿ, ಗುಣಮಟ್ಟದ ಡಾಂಬರೀಕರಣ ಕಾಮಗಾರಿ ಕೈಗೊಳ್ಳುವಂತೆ ಒತ್ತಾಯಿಸಿದರು.
ಮನವಿ ಸ್ವೀಕರಿಸಿದ ಶಾಸಕರು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರದಲ್ಲೇ ರಸ್ತೆ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಕರವೇ ತಾಲೂಕು ಅಧ್ಯಕ್ಷ ಅಂಬ್ರೇಶ ಕಟ್ಟಿಮನಿ, ಉಪಾಧ್ಯಕ್ಷ ಆಂಜನೇಯ ಇಂಬ್ರಾಹಿಪೂರ, ಸಂಘಟನೆ ಕಾರ್ಯದರ್ಶಿ ರಾಘು ಬಡಿಗೇರ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.