ನೀಟ್ ಪರೀಕ್ಷೆ ಅಕ್ರಮ ಖಂಡಿಸಿ ಜುಲೈ 23ರಂದು ಡಿಎಸ್‌ಎಸ್ ಪ್ರತಿಭಟನೆ

ಶಹಾಪೂರ: 
ನೀಟ್ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ದೇಶದಲ್ಲಿ ನಡೆಯುತ್ತಿರುವ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳಿಗೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಬೇಕು. ಸಂಪುಟದಿಂದ ವಜಾಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.
ಸಂಚಾಲಕರಾದ ಶಿವಪುತ್ರ ಜವಳಿ ಪತ್ರಿಕಾ ಹೇಳಿಕೆ ನೀಡಿ, ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳಿಂದ ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತಿದ್ದು, ಪರೀಕ್ಷಾ ವ್ಯವಸ್ಥೆಯ ಮೇಲಿನ ನಂಬಿಕೆ ಕುಸಿದಿದೆ. ಈ ಅಕ್ರಮಗಳಿಗೆ ಕೇಂದ್ರ ಸರ್ಕಾರವೇ ನೇರ ಹೊಣೆಗಾರವಾಗಿದೆ ಎಂದು ಆರೋಪಿಸಿದರು. ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹಕ್ಕೂ ಸಂಘಟನೆ ತನ್ನ ಬೆಂಬಲವನ್ನು ಘೋಷಿಸಿದೆ ಎಂದು ತಿಳಿಸಿದ್ದಾರೆ. ಜುಲೈ 23ರಂದು ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ  ಹಮ್ಮಿಕೊಳ್ಳಲಾಗಿದ್ದು,ನಂತರ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಮಂತ್ರಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.
ಪ್ರತಿಭಟನೆಯಲ್ಲಿ ಚಂದಪ್ಪ ಮುನಿಯಪ್ಪನೋರ್,ಮರೆಪ್ಪ ಕ್ರಾಂತಿ,ಶಿವಲಿಂಗ ಹಸನಾಪೂರ,ದೊಡ್ಡಪ್ಪ ಕಾಡಂಗೇರಾ,ಮಲ್ಲು ಕುರಕುಂದ, ಸಂತೋಷ ಗುಂಡಳ್ಳಿ, ದೇವು ಹುಲಕಲ್, ಸಂತೋಷ,ನಾಗರಾಜ ಕೊಡಮನಹಳ್ಳಿ, ನಾಗರಾಜ ಕೊಡಮನಹಳ್ಳಿ,ಭೀಮಾಶಂಕರ,ಡಿಎಸ್‌ಎಸ್ ಮುಖಂಡರು ಭಾಗವಹಿಸಲಿದ್ದಾರೆ ಎಂದರು.

Leave a Reply

Your email address will not be published. Required fields are marked *