ಶಹಾಪುರ:
ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯಕ್ರಮದ ಅಂಗವಾಗಿ ಕನ್ನೇಕೋಳೂರ ಗ್ರಾಮದಲ್ಲಿ ಬಿಜೆಪಿ ವತಿಯಿಂದ ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ಬಿಎಲ್‌ಒಗಳೊಂದಿಗೆ ಮನೆ-ಮನೆಗೆ ಭೇಟಿ ನೀಡಿ ಮತದಾರರ ಮಾಹಿತಿ ಪರಿಶೀಲನೆ ಹಾಗೂ ಜಾಗೃತಿ ಮೂಡಿಸುವ ಕಾರ್ಯ ನಡೆಸಲಾಯಿತು.
ಈ ಸಂದರ್ಭದಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ, ಸ್ಥಳಾಂತರ ಹಾಗೂ ಹೆಸರು ತೆಗೆದುಹಾಕುವ ಪ್ರಕ್ರಿಯೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು. ಅರ್ಹ ಪ್ರತಿಯೊಬ್ಬ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಪರಿಶೀಲಿಸಿಕೊಂಡು ಅಗತ್ಯ ದಾಖಲೆಗಳನ್ನು ಸಲ್ಲಿಸಿ ವಿಶೇಷ ಪರಿಷ್ಕರಣೆ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಲಾಯಿತು.
ಮತದಾರರ ಪಟ್ಟಿಯನ್ನು ನಿಖರ ಹಾಗೂ ದೋಷರಹಿತವಾಗಿಸಲು ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕರು ಈ ವಿಶೇಷ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಮುಖಂಡರು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರಾದ ರಾಚಣ್ಣ ಸಾಹು ಕರದಳ್ಳಿ, ಶಿವಪುತ್ರಪ್ಪ ಗೌಡ ಮಾಲಿಪಾಟೀಲ, ನಾಗಣಗೌಡ, ಸಿದ್ದಣ್ಣಗೌಡ, ಬನ್ನಪ್ಪ ನಾಟೇಕಾರ, ಬಿಎಲ್‌ಒ-2 ರಾಜಶೇಖರ ಮಲ್ಹಾರ ಶೆಟ್ಟಿ, ಸುರೇಶ್ ಬಾಬು ಹೊಸಮನಿ, ಗ್ರಾಮ ಆಡಳಿತಾಧಿಕಾರಿಗಳು ಹಾಗೂ ಬಿಎಲ್‌ಒ-1 ಸೇರಿದಂತೆ ಇತರರು ಉಪಸ್ಥಿತರಿದ್ದರು.