ಗ್ರಾಮಗಳಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಸೇರಿದಂತೆ ಅಗತ್ಯ ಸಾರ್ವಜನಿಕ ಸೌಲಭ್ಯಗಳನ್ನು ಕಲ್ಪಿಸಿ ಜನರ ನಿರೀಕ್ಷೆಗಳಿಗೆ ಸ್ಪಂದಿಸುವ ಮೂಲಕ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ. ರಾಜ್ಯ ಸರ್ಕಾರ ಗ್ರಾಮೀಣಾಭಿವೃದ್ಧಿಗಾಗಿ ಜಾರಿಗೆ ತಂದಿರುವ ವಿವಿಧ ಯೋಜನೆಗಳನ್ನು ಗ್ರಾಮಸ್ಥರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು. ನಿಗದಿತ ಅವಧಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕರು, ಬಳಿಕ ಸಾರ್ವಜನಿಕರ ಅಹವಾಲುಗಳು ಹಾಗೂ ಕುಂದುಕೊರತೆಗಳನ್ನು ಆಲಿಸಿ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಮಹಾಂತಪ್ಪ ಸಾಹು ಚಂದಾಪುರ, ಯಾದಗಿರಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಮಲ್ಲಪ್ಪ ಉಳ್ಳಂಡಗೇರಿ, ಗ್ರಾಮದ ಮುಖಂಡರಾದ ಹೊನ್ನಪ್ಪಗೌಡ, ಮಹಾಂತಗೌಡ, ಶರಣಗೌಡ, ಭಿಕ್ಷಣ್ಣಗೌಡ, ಚಂದ್ರಕಾಂತ ರಾಠೋಡ, ಪವನ ಕುಲಕರ್ಣಿ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.