ಶಹಾಪೂರ:
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಜನ್ಮದಿನದ ಅಂಗವಾಗಿ ತಾಲೂಕಿನ ದೋರನಹಳ್ಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೆಪಿಸಿಸಿ ಸಂಯೋಜಕ ಹಾಗೂ ಕೆಪಿಸಿಸಿ ಕಿಸಾನ್ ಘಟಕದ ಪ್ರಧಾನ ಕಾರ್ಯದರ್ಶಿ ರಾಜ ಮೈನುದ್ದೀನ್ ಜಮಾದಾರ ಅವರ ನೇತೃತ್ವದಲ್ಲಿ ರೋಗಿಗಳಿಗೆ ಹಣ್ಣು, ಬ್ರೆಡ್ ಹಾಗೂ ಹಾಲು ವಿತರಿಸಿ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ರಾಜ ಮೈನುದ್ದೀನ್ ಜಮಾದಾರ, ಯಾದಗಿರಿ ಜಿಲ್ಲೆಯ ಹೆಮ್ಮೆಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಅವರಿಗೆ ದೇವರು ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ಕರುಣಿಸಿ ಇನ್ನಷ್ಟು ವರ್ಷಗಳ ಕಾಲ ಜನಸೇವೆ ಮಾಡುವ ಶಕ್ತಿ ನೀಡಲಿ ಎಂದು ಹಾರೈಸಿದರು. ಸಿದ್ದಪ್ಪ ಸಾಖಮಗೇರಿ, ಚಂದ್ರಾಮಪ್ಪ ಕೊಂಬಿನ್, ರಾಜು ಕುದರಿ, ಹಣಮಂತ ನಂದಳ್ಳಿ, ಮಾನಪ್ಪ ಗೋಡೆನೂರ, ಮಲ್ಲಿಕಾರ್ಜುನ ಬಡಿಗೇರ, ಹಣಮಂತ ಕಸನ್
ಇದ್ದರು.