ಶಹಾಪುರ: ಕರ್ನಾಟಕ ಸರ್ಕಾರದ ಮಾಜಿ ಸಚಿವರು ಹಾಗೂ ಶಹಾಪುರ ಮತಕ್ಷೇತ್ರದ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಅವರು ಸೆ.3ರಂದು ಶಹಾಪುರ ಮತಕ್ಷೇತ್ರದ ವಿವಿಧ ಗ್ರಾಮ ಪಂಚಾಯಿತಿ ಮಟ್ಟದ ಪ್ರದೇಶಗಳಿಗೆ ಭೇಟಿ ನೀಡಿ, ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.
ಪ್ರವಾಸದ ಅಂಗವಾಗಿ ಬೆಳಿಗ್ಗೆ 10 ಗಂಟೆಗೆ ಮಾಲಗತ್ತಿ, 11 ಗಂಟೆಗೆ ಹೆಗ್ಗಣಡೋಡಿ, ಮಧ್ಯಾಹ್ನ 12 ಗಂಟೆಗೆ ಕಿರಡಹಳ್ಳಿ ಹಾಗೂ 1 ಗಂಟೆಗೆ ಕರಡಕಲ ಗ್ರಾಮಗಳಿಗೆ ಭೇಟಿ ನೀಡಿ, ಅಲ್ಲಿನ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಸಭೆ ನಡೆಸಲಿದ್ದಾರೆ.
ಸಭೆಗಳಲ್ಲಿ ಸ್ಥಳೀಯವಾಗಿ ಪಕ್ಷದ ಸಂಘಟನೆ ಬಲಪಡಿಸುವುದು, ಜನರ ಸಮಸ್ಯೆಗಳು ಹಾಗೂ ಕ್ಷೇತ್ರದ ಅಭಿವೃದ್ಧಿ ಕುರಿತು ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಚರ್ಚೆ ನಡೆಸುವ ನಿರೀಕ್ಷೆಯಿದೆ.
ಪ್ರತಿಯೊಂದು ಗ್ರಾಮ ಪಂಚಾಯಿತಿ ಮಟ್ಟದ ಸಭೆಯಲ್ಲಿ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.