ಯಾದಗಿರಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯಕಾರಿಣಿಗೆ ನೂತನವಾಗಿ ನಾಮನಿರ್ದೇಶನಗೊಂಡ ಸದಸ್ಯರನ್ನು ಸನ್ಮಾನಿಸಲಾಯಿತು.ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ನೂತನ ಸದಸ್ಯರನ್ನು ಸನ್ಮಾನಿಸಿ, ಸಂಘದ ಮುಂದಿನ ಕಾರ್ಯಚಟುವಟಿಕೆಗಳ ಕುರಿತು ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್, ಸಂಘದ ಸದಸ್ಯರು ಸಕ್ರಿಯವಾಗಿ ತೊಡಗಿಸಿಕೊಂಡು ಸಂಘದ ಪ್ರಗತಿಗೆ ಸಹಕರಿಸಬೇಕು. ಎಲ್ಲರೂ ಸಂಘಟಿತರಾಗಿ ಕೆಲಸ ಮಾಡುವ ಮೂಲಕ ಪತ್ರಕರ್ತರ ಹಿತಾಸಕ್ತಿ ಹಾಗೂ ಸೌಲಭ್ಯಗಳಿಗಾಗಿ ಸರ್ಕಾರದ ಮಟ್ಟದಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು ಎಂದರು.
ಜಿಲ್ಲೆಯಲ್ಲಿ ಸಂಘವು ಉತ್ತಮವಾಗಿ ಕಾರ್ಯನಿರ್ವಹಿಸಲು ಪ್ರತಿಯೊಬ್ಬ ಸದಸ್ಯರ ಸಹಕಾರ ಅಗತ್ಯವಾಗಿದೆ. ನಾಮನಿರ್ದೇಶನಗೊಂಡಿರುವ ಸದಸ್ಯರು ತಮಗೆ ದೊರೆತಿರುವ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಸಂಘದ ಬಲವರ್ಧನೆಗೆ ಶ್ರಮಿಸಬೇಕು ಎಂದು ಹೇಳಿದರು.
ಜಿಲ್ಲಾ ಕಾರ್ಯಕಾರಿಣಿಗೆ ನಾಮನಿರ್ದೇಶನಗೊಂಡಿರುವ ಹನುಮಂತ ಪಿ., ಗಣೇಶ್ ಪಾಟೀಲ್, ಭೀಮಣ್ಣ ವಡವಟ್, ನಾಗರಾಜ ಕೋಟೆ ಹಾಗೂ ಪದನಿಮಿತ್ತ ಸದಸ್ಯ ಮಹೇಶ್ ಕಲಾಲ್ ಅವರನ್ನು ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ವಿಶಾಲ್ ದೋರನಹಳ್ಳಿ, ಖಜಾಂಚಿ ರಾಜು ನಲ್ಲಿಕರ್, ಪರಶುರಾಮ ಐಕೂರು, ನಾಗಪ್ಪ ನಾಯ್ಕಲ್, ದೇವರಾಜ ನಾಯಕ ವರ್ಕನಹಳ್ಳಿ, ರಾಘವೇಂದ್ರ ಕೆ.ಬಿ., ಆನಂದ ಗೋರ್ಕಲ್, ಸಾಜೀದ್ ಹಯಾತ್ ಹಾಗೂ ರಾಜೇಂದ್ರ ಕಲಾಲ್ ಉಪಸ್ಥಿತರಿದ್ದರು.