ಶಹಾಪುರ,,
ತಾಲೂಕಿನ ಗೋಗಿ ಹೋಬಳಿ ಹಾಗೂ ಶಹಾಪುರ ನಗರದಲ್ಲಿ ನಡೆದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಸಲ್ಲಿಕೆಯಾಗಿರುವ ಹಿತಾಸಕ್ತಿ ಅರ್ಜಿಗಳ ಇತ್ಯರ್ಥದ ಪ್ರಗತಿ ಕುರಿತು ಪರಿಶೀಲಿಸಲು ಶಾಸಕರಾದ ಶರಣಬಸಪ್ಪಗೌಡ ದರ್ಶನಾಪುರ ನಾಳೆ ಬೆಳಿಗ್ಗೆ 10:30 ಗಂಟೆಗೆ ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಲಿದ್ದಾರೆ ಎಂದು ತಹಶಿಲ್ದಾರರು ತಿಳಿಸಿದ್ದಾರೆ.ಈ ಸಂದರ್ಭದಲ್ಲಿ ಸಾರ್ವಜನಿಕರ ಅರ್ಜಿಗಳ ಇತ್ಯರ್ಥಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಯಲಿದೆ ಎಂದು ಹೇಳಿದರು.