ಆಂಬುಲೆನ್ಸ್ ನಲ್ಲಿ ಹೆರಿಗೆ ಮಾಡಿಸಿದ ಸಿಬ್ಬಂದಿ

ಶಹಾಪುರ:ಗಂಭೀರ ಸ್ಥಿತಿಯಲ್ಲಿ ತೀವ್ರ ಹೆರಿಗೆ ನೋವಿನಿಂದ ನರಳುತ್ತಿದ್ದ ಮಹಿಳೆಗೆ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಆಂಬ್ಯುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ತಾಲ್ಲೂಕಿನ ಸೈದಾಪೂರ ಗ್ರಾಮದ ಮಾರ್ಗಮಧ್ಯೆ ಜರುಗಿದೆ.

ಶಹಾಪುರ ತಾಲ್ಲೂಕಿನ ನಾಗನಟಿಗಿ ಗ್ರಾಮದ ಬೀಬಿ ಫಾತಿಮಾ ಗಂಡ ಬಂದೇನವಾಜ್ ಅಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ ಮಗು ಮತ್ತು ತಾಯಿ ಆರೋಗ್ಯದಿಂದ ಇದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ .

ಸರಕಾರಿ ಆಂಬ್ಯುಲೆನ್ಸ್ ನಲ್ಲಿ ನಾಗನಟಿಗಿ ಗ್ರಾಮ ದಿಂದ ಶಹಾಪುರ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಬರುವಾಗ ಸೈದಾಪುರ ಮಾರ್ಗ ಮಧ್ಯ ಬೆಳಗ್ಗೆ 11 ಗಂಟೆಯ ಸುಮಾರಿಗೆ ಹೆರಿಗೆ ನೋವು ಕಾಣಿಸಿಕೊಂಡು ಅಂಬುಲೆನ್ಸಿನ ಸಿಬ್ಬಂದಿಗಳು ಹೆರಿಗೆ ಮಾಡಿಸಿ ಮಾನವೀಯತೆ ಮೆರೆದಿದ್ದಾರೆ.

ಸ್ಟಾಫ್ ನರ್ಸ್ ಸುರೇಶ್ ಹಾಗೂ ಪೈಲಟ್ ಈರಯ್ಯ,ಲಾಲ್ ಸಾಬ್ ಜೊತೆಗಿದ್ದರು.ತಾಯಿ ಮತ್ತು ಮಗುವಿನ ಆರೋಗ್ಯದ ದೃಷ್ಟಿಯಿಂದ ಶಹಾಪುರ ತಾಲ್ಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *