ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಿಂದ ಹನುಮಂತಪ್ಪ ಹಳ್ಳಿಕೇರಿಗೆ ಕ್ಷೇಮನಿಧಿಯಿಂದ ₹20 ಸಾವಿರ, ಸಿಎಂ ಪರಿಹಾರ ನಿಧಿಯಿಂದ ₹4 ಲಕ್ಷ ನೆರವು

ಕೊಪ್ಪಳ: ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿ ಚೇತರಿಸಿಕೊಂಡು ಮನೆಗೆ ಮರಳಿರುವ ಕೊಪ್ಪಳ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಹನುಮಂತಪ್ಪ ಹಳ್ಳಿಕೇರಿ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ನಿವಾಸದಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಕೆಯುಡಬ್ಲ್ಯೂಜೆ ಕ್ಷೇಮನಿಧಿಯಿಂದ ₹20 ಸಾವಿರ ನೆರವಿನ ಚೆಕ್‌ ಅನ್ನು ಹನುಮಂತಪ್ಪ ಹಳ್ಳಿಕೇರಿ ಅವರಿಗೆ ಹಸ್ತಾಂತರಿಸಿದರು. ಇದೇ ವೇಳೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ₹4 ಲಕ್ಷ ನೆರವು ದೊರಕಿಸಿಕೊಟ್ಟಿದ್ದಕ್ಕಾಗಿ ಹಳ್ಳಿಕೇರಿ ಅವರು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರಿಗೆ ಕೃತಜ್ಞತೆ ಸಲ್ಲಿಸಿದರು.

ಮೂತ್ರಪಿಂಡ ದಾನ ಮಾಡಿದ ಹನುಮಂತಪ್ಪ ಹಳ್ಳಿಕೇರಿ ಅವರ ಸಹೋದರಿಯನ್ನು ಇದೇ ಸಂದರ್ಭದಲ್ಲಿ ಅಭಿನಂದಿಸಿ, ಅವರ ತ್ಯಾಗ ಮತ್ತು ಸಹಕಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಲಾಯಿತು.

ಹನುಮಂತಪ್ಪ ಹಳ್ಳಿಕೇರಿ ಅವರು ಶೀಘ್ರವಾಗಿ ಸಂಪೂರ್ಣ ಗುಣಮುಖರಾಗಿ, ಎಂದಿನಂತೆ ಲವಲವಿಕೆಯಿಂದ ಪತ್ರಕರ್ತ ವೃತ್ತಿ ಹಾಗೂ ಸಂಘಟನಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತಾಗಲಿ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಕೊಪ್ಪಳದ ಪತ್ರಕರ್ತರ ಸಂಘದ ಹರೀಶ್, ನಾಗರಾಜು, ರಾಜು, ರುದ್ರಗೌಡ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *