ಐದನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಸಾಧಕರಿಗೆ ಸನ್ಮಾನ ಸಮಾರಂಭ
ಶಹಾಪುರ: ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘದ ವತಿಯಿಂದ ಫೆಬ್ರವರಿ 10ರಂದು ಸಂಘದ ಐದನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಉಚಿತ ಸಾಮೂಹಿಕ ವಿವಾಹ ಸಮಾರಂಭ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಸಂಸ್ಥಾಪಕ ಅಧ್ಯಕ್ಷ ಮೌನೇಶ ಹಳಿಸಗರ ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಾರ್ಮಿಕರು ಹಾಗೂ ರೈತರ ಹಿತಾಸಕ್ತಿಗಾಗಿ ಸಂಘಟನೆಯು ಕಳೆದ ನಾಲ್ಕು ವರ್ಷಗಳಿಂದ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ. ಇದೀಗ ಐದನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ವಾರ್ಷಿಕೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ.
ಕಾರ್ಯಕ್ರಮದಲ್ಲಿ ನಾಡಿನ ಹರಗುರು ಚರಮೂರ್ತಿಗಳು, ರಾಜಕೀಯ ಮುಖಂಡರು, ಸಾಹಿತಿಗಳು, ಚಿಂತಕರು, ವಿವಿಧ ಸಮಾಜಗಳ ಮುಖಂಡರು ಹಾಗೂ ವಿವಿಧ ಸಂಘಟನೆಗಳ ಹೋರಾಟಗಾರರು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಗುವುದು.
ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಮದುವೆಯಾಗಲು ಇಚ್ಛಿಸುವ ವಧು-ವರರು ಸಂಘಟನೆಯೊಂದಿಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಮೌನೇಶ ಹಳಿಸಗರ ಮನವಿ ಮಾಡಿದ್ದಾರೆ.ಮೊ. 9731520852…