ಬೆಂಗಳೂರು:ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಶರಣಬಸಪ್ಪಗೌಡ ದರ್ಶನಾಪುರ

ಬೆಂಗಳೂರು:ಶಾಲಾ ಮಕ್ಕಳ ಪಠ್ಯ ಪುಸ್ತಕ ಪರಿಷ್ಕರಣೆ ನೆಪದಲ್ಲಿ ರಾಜ್ಯ ಬಿಜೆಪಿ ಸರ್ಕಾರ ಶಿಕ್ಷಣ ಕ್ಷೇತ್ರವನ್ನ ಕೇಸರಿಕರಣಗೊಳಿಸುತ್ತಿದ್ದು, ಈ ನೆಲದ ಸಾಕ್ಷಿ ಪ್ರಜ್ಞೆ ಮಹಾತ್ಮ ಬಸವೇಶ್ವರ, ಸಾವಿತ್ರಿಬಾಯಿ ಫುಲೆ, ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್, ರಾಷ್ಟ್ರಕವಿ ಕುವೆಂಪು ರವರ ಇತಿಹಾಸ ತಿರುಚಿದ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಇಂದು ವಿಧಾನಸೌಧದಲ್ಲಿನ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ಪಕ್ಷದ ವತಿಯಿಂದ  ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್,ಶಾಸಕರಾದ ಶರಣಬಸಪ್ಪಗೌಡ ದರ್ಶನಾಪುರ, ಪ್ರಿಯಾಂಕ್ ಖರ್ಗೆ , ಡಾ.ಅಜಯ್ ಸಿಂಗ್, ಬಿ ಆರ್ ಪಾಟೀಲ್ , ಸೇರಿದಂತೆ ಶಾಸಕರು, ಮಾಜಿ ಸಚಿವರು   ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *