ಕಾಂಗ್ರೆಸ್ ಮುಖಂಡರ ಮೇಲೆ ಹಲ್ಲೆ ಖಂಡನೀಯ.

ಶಹಾಪುರ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಯುವ ನಾಯಕ ರಾಹುಲ್ ಗಾಂಧಿಯವರಿಗೆ ಇಡಿ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ನಾಯಕರು ಅವರನ್ನು ಭೇಟಿಯಾಗಲು ಹೋದಾಗ ದೆಹಲಿ ಪೊಲೀಸರು ಹಲ್ಲೆ ಮಾಡಿರುವುದು ಖಂಡನೀಯ ಎಂದು ಕಾಂಗ್ರೆಸ್ ಪಕ್ಷದ ಯುವ ಮುಖಂಡ ನಿಜಗುಣ ದೋರನಹಳ್ಳಿ ಹೇಳಿದರು.

ಅನ್ಯಾಯವಾದಾಗ ಪ್ರತಿಭಟನೆಗಿಳಿದು ನ್ಯಾಯ ಕೇಳುವುದು ಪ್ರತಿಯೊಬ್ಬರ ಜನ್ಮಸಿದ್ಧ ಹಕ್ಕು.ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದ ನಮ್ಮ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರುಗಳು ಪ್ರತಿಭಟಿಸುತ್ತಿರುವಾಗ ಏಕಾಏಕಿ ದೆಹಲಿ ಪೊಲೀಸರು ದಬ್ಬಾಳಿಕೆಯಿಂದ ಮಾಡಿ ಅವಮಾನಿಸಿದ್ದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ ಕಾಂಗ್ರೆಸ್ ನಾಯಕರ ಹಲ್ಲೆ ಪ್ರಕರಣದ ಹಿಂದೆ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರ ಕೈವಾಡ ಇದೆ ಎಂದು ತಿಳಿಸಿದರು.ಇದರಿಂದ ಮುಂಬರುವ ದಿನಗಳಲ್ಲಿ ಬಿಜೆಪಿಗೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ನುಡಿದರು.

Leave a Reply

Your email address will not be published. Required fields are marked *