ವಡಗೇರಾ:ತಾಲೂಕಿನ ವಿವಿಧ ಗ್ರಾಮಗಳಿಗೆ ಸಿಇಓ ಭೇಟಿ ಕಾಮಗಾರಿ ಪರಿಶೀಲನೆ

ಶಹಾಪೂರ:ವಡಗೇರಾ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಅಂಬರೀಶ್ ನಾಯಕ್ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಿದರು.ಐಕೂರು ಗ್ರಾಮಕ್ಕೆ ಭೇಟಿ ನೀಡಿದ ಸಿಇಒ ಜಲ ಜೀವನ ಮಿಷನ್(JJM) ಕಾಮಗಾರಿ ಅಡಿಯಲ್ಲಿನ ಗ್ರಾಮದ ಹೊರ ಭಾಗದಲ್ಲಿ ನಡೆಯುತ್ತಿರುವ ಕಾಮಗಾರಿ ನೀರಿನ ಟ್ಯಾಂಕ್ ಮತ್ತು ಇತರ ಕಾಮಗಾರಿಗಳನ್ನು ಪರಿಶೀಲಿಸಿದರು.ಆದಷ್ಟು ಬೇಗ ಕಾಮಗಾರಿಯನ್ನು ಪೂರ್ಣಗೊಳಿಸಿ.ಕುಡಿಯುವ ನೀರಿನ ಸೌಲಭ್ಯವನ್ನು ಗ್ರಾಮಕ್ಕೆ ಒದಗಿಸಿಕೊಡಬೇಕು ಎಂದು ತಿಳಿಸಿದರು.ನಂತರ ಗ್ರಾಮದಲ್ಲಿರುವ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ  ಶಾಲಾ ಮಕ್ಕಳ ಜೊತೆ ಬಿಸಿಯೂಟ ಸವಿಸಿದರು.ಬಿಸಿಯೂಟದಲ್ಲಿ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದು ಶಿಕ್ಷಕರಿಗೆ ಹೇಳಿದರು. ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದರು.

 

ಜಿಲ್ಲಾ ಪಂಚಾಯಿತಿ ಸಿಇಒ ಐಕೂರು ಗ್ರಾಮದ ಪ್ರಾಥಮಿಕ ಶಾಲಾ ಮಕ್ಕಳ ಜೊತೆ ಬಿಸಿಯೂಟ ಸವಿಯುತ್ತಿರುವದು ಮತ್ತು ಗ್ರಾಮದ ಜೆಜೆಎಮ್ ಕಾಮಗಾರಿಯ ನೀರಿನ ಟ್ಯಾಂಕನ್ನು ವೀಕ್ಷಿಸುತ್ತಿರುವುದು.

ಹಯ್ಯಳ ಬಿ ಗ್ರಾಮಕ್ಕೆ ಭೇಟಿ ನೀಡಿದ ಸಿಇಒ,ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಆಸ್ಪತ್ರೆಯನ್ನು ಪರಿಶೀಲಿಸಿದರು.ಹೈಯ್ಯಾಳ ಬಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದ ಅವರು ಪಂಚಾಯಿತಿಯ ಮುಂದಿರುವ ಕಸದ ತೊಟ್ಟಿಯನ್ನು ಸ್ವಚ್ಛಗೊಳಿಸುವಂತೆ ಹೇಳಿದರು.ಕಸವಿಲೇವಾರಿ ವಾಹನದ ಮೂಲಕ ಪಂಚಾಯಿತಿ ವ್ಯಾಪ್ತಿಯ ಗ್ರಾಮದಲ್ಲಿ ಕಸವನ್ನು ವಿಲೇವಾರಿ ಮಾಡಿ ಎಂದು ಗ್ರಾಮ ಪಂಚಾಯತಿ ಸಿಬ್ಬಂದಿಯವರಿಗೆ ಸೂಚಿಸಿದರು.

 

ಹೈಯ್ಯಾಳ ಬಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದರು.

ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಸವರಾಜ್ ಸಜ್ಜನ್,ಸಹಾಯಕ ನಿರ್ದೇಶಕರಾದ ಮಲ್ಲಿಕಾರ್ಜುನ ಸಂಗ್ವಾರ,ಐಕೂರು ಗ್ರಾಪಂ.ಪಿಡಿಒ ವಿಶ್ವನಾಥ,ಹೈಯ್ಯಾಳ ಬಿ ಗ್ರಾಮ ಪಂಚಾಯಿತಿ ಪಿಡಿಓ ವೀರೇಶ್, ದೇವೇಂದ್ರಪ್ಪ ಮಾಚಗುಂಡಾಳ,ಜೆಇ,ಸೇರಿದಂತೆ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಗ್ರಾಮಸ್ಥರು,ಶಾಲಾ ಶಿಕ್ಷಕರು,ಅಂಗನವಾಡಿ ಕಾರ್ಯಕರ್ತೆಯರು,ಗ್ರಾಮ ಪಂಚಾಯಿತಿ ಸದಸ್ಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *