ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷರಿಂದ ಸಂಸ್ಕರಣ ಘಟಕ ಕಾಮಗಾರಿ ಪರಿಶೀಲನೆ

ವಿವಿಢೇಸ್ಕ:ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ವತಿಯಿಂದ ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನಲ್ಲಿರುವ ನಿಗಮದ ಉಣ್ಣೆ ಸಂಸ್ಕರಣಾ ಘಟಕ ಕಾಮಗಾರಿಯನ್ನು ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶರಣು ತಳ್ಳಿಕೇರಿ ಅವರು ಪರಿಶೀಲಿಸಿದರು.

ನೂತನವಾಗಿ ರಾಣೆಬೆನ್ನೂರಿನಲ್ಲಿಯೆ ನಿಗಮದ ವತಿಯಿಂದ ನೂತನವಾಗಿ ವಾಣಿಜ್ಯ ಸಂಕೀರ್ಣ ಘಟಕ ಸ್ಥಾಪಿಸಲಾಗುತ್ತಿದ್ದು, ಈ ಸಂಬಂಧ ಸ್ಥಳ ವೀಕ್ಷಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.ಈ ಸಂದರ್ಭದಲ್ಲಿ ರಾಣೆಬೆನ್ನೂರು ಕ್ಷೇತ್ರದ ಶಾಸಕರಾದ ಅರುಣ್ ಪೂಜಾರಿ ಅವರು ನಿಗಮದ ಅಧ್ಯಕ್ಷರನ್ನು ಗೌರವಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಡಾ:ಜೆ ಪಂಪಾಪತಿ, ನಿಗಮದ ಮುಖ್ಯ ಪಶುವೈದ್ಯಾಧಿಕಾರಿಯಾದ ಡಾ. ಹೆಚ್ ಟಿ ಮುರಳಿಧರ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *