ಹಯ್ಯಳ ಬಿ. ಗ್ರಾಮ ಪಂಚಾಯಿತಿ | ಅವಿಶ್ವಾಸದಲ್ಲಿ ಗೆದ್ದ ಅಧ್ಯಕ್ಷ ಮೌನೇಶ್ ಪೂಜಾರಿ

ಯಾದಗಿರಿ:ವಡಗೇರಾ ತಾಲೂಕಿನ ಹಯ್ಯಳ ಬಿ. ಗ್ರಾಮ ಪಂಚಾಯಿತಿಯಲ್ಲಿ ಇಂದು ನಡೆದ ಅಧ್ಯಕ್ಷರ ಅವಿಶ್ವಾಸವು ಬಿದ್ದು ಹೋಯಿತು. 14 ಜನ ಗ್ರಾಮ ಪಂಚಾಯಿತಿ ಸದಸ್ಯರಲ್ಲಿ 10 ಜನ ಸದಸ್ಯರು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಮೌನೇಶ್ ಪೂಜಾರಿ ವಿರುದ್ಧ ಅವಿಶ್ವಾಸ ಮಂಡನೆ ಮಾಡಿದ್ದರು. ಗ್ರಾಮ ಪಂಚಾಯಿತಿಯಲ್ಲಿ ಮದರಕಲ್ ಯಕ್ಷಿಂತಿ ಗ್ರಾಮಗಳನ್ನೊಳಗೊಂಡಿದ್ದು, ಇಂದು ನಡೆಯಬೇಕಿದ್ದ ಅವಿಶ್ವಾಸ ಮಂಡನೆಯಲ್ಲಿ ಕೇವಲ ಒಬ್ಬ ಜನ ಗ್ರಾಮ ಪಂಚಾಯಿತಿ ಸದಸ್ಯರು ಹಾಜರಾಗಿದ್ದರು. ಅಪರ ಜಿಲ್ಲಾಧಿಕಾರಿಗಳು ಆಗಮಿಸಿದ್ದರು. ಆದರೆ ಕೇವಲ ಒಬ್ಬ ಗ್ರಾಮ ಪಂಚಾಯಿತಿ ಸದಸ್ಯ ಆಗಮಿಸಿದ್ದರಿಂದ ಅವಿಶ್ವಾಸ ಬಿದ್ದು ಮತ್ತೆ ಮೌನೇಶ್ ಪೂಜಾರಿಯವರು ಅಧ್ಯಕ್ಷರಾಗಿ ಮುಂದುವರಿದರು ಎಂದು ಘೋಷಿಸಲಾಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮೌನೇಶ್ ಪೂಜಾರಿ ಅಧ್ಯಕ್ಷರಾಗಿದ್ದುಕೊಂಡು ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ 3 ಗ್ರಾಮಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚು ಹೊತ್ತು ಕೊಟ್ಟಿದ್ದರು. ಮೂಲತಃ ಹೈಯಳ ಗ್ರಾಮ ಪಂಚಾಯಿತಿಯು ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯಿತಿ.ಇಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರ ಸಂಖ್ಯೆ ಹೆಚ್ಚಾದ ಕಾರಣ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಮೌನೇಶ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಗ್ರಾಮ ಪಂಚಾಯಿತಿಯಲ್ಲಿ ಯಾವುದೇ ಅಕ್ರಮ ನಡೆಯದಂತೆ ನಡೆದುಕೊಂಡು ಬಂದಿದ್ದರು. ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷರ ಮತ್ತು ಸದಸ್ಯರ ನಡುವೆ ಜಟಾಪಟಿ ಪ್ರಾರಂಭವಾಗಿತ್ತು. ಆಶ್ರಯ ಮನೆಗಳ ಹಂಚಿಕೆಯಲ್ಲಿಯೂ ಶಾಸಕರ ಮತ್ತು ಗ್ರಾಮ ಪಂಚಾಯಿತಿ ಅಧ್ಯಕ್ಷರ ನಡುವೆ ವೈ ಮನಸಿನ ಪರಿಣಾಮವು ಇದಕ್ಕೆ ತಳಕು ಹಾಕಿಕೊಂಡಿತ್ತು ಎಂದು ಹೇಳಲಾಗುತ್ತಿದೆ ?.

ಇತ್ತೀಚಿಗೆ ಕಾಂಗ್ರೆಸ್ಸಿನ ಯುವ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದ ಮೌನೇಶ್ ಪೂಜಾರಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗಟ್ಟಿಗೊಳಿಸಲು ಪ್ರಯತ್ನಿಸುತ್ತಿದ್ದರು. ಸಾಮಾಜಿಕ ಜಾಣತಾಣದಲ್ಲಿ ಪ್ರತಿದಿನವೂ ಜಾಲ್ತಿಯಲ್ಲಿ ಇರುವುದನ್ನು ಸಹಿಸದ ಗ್ರಾಮದ ಮತ್ತು ಜಿಲ್ಲಾಮಟ್ಟದ ಕೆಲ ಕಾಂಗ್ರೆಸ್ ನಾಯಕರು ಮೌನೇಶ್ ಪೂಜಾರಿಯನ್ನು ಬೆಳೆಯಲು ಕಾಂಗ್ರೆಸ್ ಪಕ್ಷದಲ್ಲಿ ಹೀಗೆ ಬಿಟ್ಟರೆ ಉತ್ತಮ ನಾಯಕನಾಗಿ ಬೆಳೆದರೆ ನಮಗೆ ತೊಂದರೆಯಾಗುತ್ತದೆ ಎನ್ನುವ ದೃಷ್ಟಿಯಿಂದ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಪ್ರಯತ್ನಿಸುತ್ತಿದ್ದರು. ಅವಿಶ್ವಾಸ ಬಿದ್ದು ಹೋದ ಕಾರಣ ಜಿಲ್ಲಾ ಮಟ್ಟದ ಕೆಲವು ಕಾಂಗ್ರೆಸ್ ನಾಯಕರು ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ ?.ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಬಿಜೆಪಿ ಬೆಂಬಲಿತ ಕೆಲವು ಸದಸ್ಯರು ಸೇರಿಕೊಂಡು ಅವಿಶ್ವಾಸ ಮಂಡನೆಗೆ ಅಪರ ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದ್ದರು. ಇಂದು ಅವಿಶ್ವಾಸ ಮಂಡನೆಗೆ ದಿನಾಂಕ ನಿಗದಿಗೊಳಿಸಲಾಗಿತ್ತು.

ಇದು ಸತ್ಯಕ್ಕೆ ಸಿಕ್ಕ ಗೆಲುವಾಗಿದೆ.ನಾನು ಕಟ್ಟಾ ಕಾಂಗ್ರೆಸ್ ಬೆಂಬಲಿಗ. ಜಾತ್ಯತೀತತೆಯನ್ನು ಅಳವಡಿಸಿಕೊಂಡು ಬಂದವನು. ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಕೆಲವು ನಾಯಕರು ನನ್ನ ಏಳಿಗೆಯನ್ನು ಸಹಿಸದೆ ಈ ರೀತಿ ಅವಿಶ್ವಾಸದ ನಾಟಕವಾಡಿದ್ದಾರೆ. ಇದಕ್ಕೆಲ್ಲ ನಾನು ಎದರುವುದಿಲ್ಲ. ಗ್ರಾಮ ಪಂಚಾಯಿತಿ ಅಧ್ಯಕ್ಷನಾಗಿ ಪಕ್ಷಾತೀತವಾಗಿ ನನ್ನ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸುತ್ತೇನೆ.

ಮೌನೇಶ ಪೂಜಾರಿ
ಗ್ರಾಮ ಪಂಚಾಯಿತಿ ಅಧ್ಯಕ್ಷ ಹಯ್ಯಳ ಬಿ

 

ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಜಿಲ್ಲಾ ಯುವ ಘಟಕದಿಂದ ಎಲ್ಲಾ ರೀತಿಯಲ್ಲಿಯೂ ಪರೋಕ್ಷವಾಗಿ ಸಹಕಾರ ಮಾಡಿದ್ದೇವೆ. ಗ್ರಾಮ ಪಂಚಾಯಿತಿಯಲ್ಲಿ ಅಸಮಾಧಾನ ಸಹಜ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರೆಲ್ಲರು ಅಸಮಾಧಾನ ಬಾರದಂತೆ ಒಗ್ಗಟ್ಟಾಗಿ ಕೆಲಸ ಮಾಡುವರು.

 

ರಾಜಕುಮಾರ.ಅಧ್ಯಕ್ಷರು
ಜಿಲ್ಲಾ ಕಾಂಗ್ರೆಸ್ ಯುವ ಘಟಕ ಯಾದಗಿರಿ

 

ಮೌನೇಶ್ ಪೂಜಾರಿ ಅವಿಶ್ವಾಸದಲ್ಲಿ ಗೆದ್ದಿರುವುದು ಸಂತಸ ತಂದಿದೆ. ಆದರೂ ಇಂದಿನ ಅವಿಶ್ವಾಸದಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರು ಬಾರದೆ ಇರುವುದು ಕಾಂಗ್ರೆಸ್ ಬೆಂಬಲಿಸಿದಂತೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಗಟ್ಟಿಯಾಗಿದೆ. ಇದರ ಬಗ್ಗೆ ಜಿಲ್ಲೆ ಮತ್ತು ರಾಜ್ಯದ ಕಾಂಗ್ರೆಸ್ ನಾಯಕರು ಗಮನಹರಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪಶ್ಚಾತ್ತಾಪ ಪಡಬೇಕಾಗುತ್ತದೆ.

 

ಡಾ.ಶರಣಬಸಪ್ಪ ಕಾಮರೆಡ್ಡಿ.ಕಾಂಗ್ರೆಸ್ ಮುಖಂಡರು

About The Author