ಕೊಪ್ಪಳ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ 75ನೇ ಹುಟ್ಟು ಹಬ್ಬದ ನಿಮಿತ್ತ ದಾವಣಗೆರೆಯಲ್ಲಿ ಅಮೃತ ಮಹೋತ್ಸವವನ್ನು ಆಚರಿಸಲಾಗುತ್ತಿದ್ದು, ಅಂದಿನ ಕಾರ್ಯಕ್ರಮಕ್ಕೆ ಕೊಪ್ಪಳ ನಗರದಿಂದ ದಾವಣಗೆರೆಗೆ ಪಾದಯಾತ್ರೆಯ ಮೂಲಕ ಹಲವಾರು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸಿದ್ದರಾಮಯ್ಯನವರು ಅಭಿಮಾನಿಗಳು ಆಗಮಿಸುತ್ತಿದ್ದು ಅಂದಿನ ಕಾರ್ಯಕರ್ಮಕ್ಕೆ ರಾಜ್ಯ ಕಾಂಗ್ರೆಸ್ ವಕ್ತಾರರು ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ 75ನೇ ಅಮೃತ ಮಹೋತ್ಸವ ಕಾರ್ಯಕ್ರಮದ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಬಿ ಎಂ ಪಾಟೀಲ್ ಡೊಳ್ಳು ಬಾರಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಐದು ವರ್ಷಗಳ ಕಾಲ ಕಾಂಗ್ರೆಸ್ ನೇತೃತ್ವದಲ್ಲಿ ಭ್ರಷ್ಟಾಚಾರ ರಹಿತವಾಗಿ ಆಡಳಿತ ನಡೆಸಿದ್ದಾರೆ. ಆಗಸ್ಟ್ ಮೂರರಂದು 75ನೇ ವರ್ಷಕ್ಕೆ ಕಾಲಿಡುತ್ತಿರುವ ಸಿದ್ದರಾಮಯ್ಯನವರು 75 ನೇ ವರ್ಷದ ಅಮೃತ ಮಹೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ದಾವಣಗೆರೆ ನಗರದಲ್ಲಿ ಜರಗಲಿದ್ದು, ಅಂದಿನ ಕಾರ್ಯಕ್ರಮಕ್ಕೆ ಕೊಪ್ಪಳದಿಂದ ಲಕ್ಷಕ್ಕೂ ಅಧಿಕ ಜನ ಆಗಮಿಸಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಕೋಆರ್ಡಿನೇಟರ್ ಆಕಿಲ್ ಅಹ್ಮದ್, ಬಳ್ಳಾರಿ ಜಿಲ್ಲಾ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಅಧ್ಯಕ್ಷ ಅಲಿವೇಲು ಸುರೇಶ್, ಎರಿಸ್ವಾಮಿ, ಸಾಮಾಜಿಕ ಜಾಲತಾಣದ ಪ್ರಧಾನ ಕಾರ್ಯದರ್ಶಿ ದೇವರಾಜ್, ಸಂತೋಷ್ ಕುರಿ, ಮುಂತಾದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಸಿದ್ದರಾಮಯ್ಯ ಸಾಹೇಬ್ರು ಅಭಿಮಾನಿಗಳು ಉಪಸ್ಥಿತರಿದ್ದರು.