ಶಾಸಕರ ಅಭಿವೃದ್ಧಿ ಕಾರ್ಯ ಮೆಚ್ಚಿ ಬಿಜೆಪಿ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆ

ಶಹಾಪುರ: ನಗರದ ಶಾಸಕರ ಗೃಹ ಕಚೇರಿಯಲ್ಲಿ ಸಗರ ಗ್ರಾಮದ 30ಕ್ಕೂ ಹೆಚ್ಚು ಕಾರ್ಯಕರ್ತರು ಬಿಜೆಪಿ, ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಶಾಸಕರಾದ ಶರಣಬಸಪ್ಪಗೌಡ ದರ್ಶನಾಪುರ ಮತ್ತು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮರಿಗೌಡ ಹುಲಕಲ್ ರವರು ಕಾಂಗ್ರೆಸ್ ಪಕ್ಷದ ಧ್ವಜ ನೀಡಿ ಕಾರ್ಯಕರ್ತರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಿಕೊಂಡರು.

ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಬಲಿಷ್ಠವಾಗುತ್ತಿದೆ.ವಿರೋಧ ಪಕ್ಷದಲ್ಲಿದ್ದುಕೊಂಡು ಕ್ಷೇತ್ರಕ್ಕೆ ಹೆಚ್ಚಿನ ಅನುದಾನವನ್ನು ತಂದಿದ್ದೆನೆ. ಜಿಲ್ಲೆಯಲ್ಲಿಯೇ ಶಹಾಪೂರ ಮತಕ್ಷೇತ್ರ ಹೆಚ್ಚಿನ ಅಭಿವೃದ್ಧಿ ಹೊಂದಿದೆ.ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು ಬೆಂಬಲಿಸಿ ಇಂದು ಹಲವಾರು ಜನರು ವಿವಿಧ ಪಕ್ಷಗಳನ್ನು ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿರುವುದು ಆನೆ ಬಲ ಬಂದಂತಾಗಿದೆ ಎಂದು ಶಾಸಕರು ಹೇಳಿದರು. ಕಾಂಗ್ರೆಸ್ ಪಕ್ಷಕ್ಕೆ ಹಲವಾರು ಯುವಕರು ಸೇರ್ಪಡೆಗೊಳ್ಳುತ್ತಿದ್ದಾರೆ. ಕಾಂಗ್ರೆಸ್ ಹಿಂದುಳಿದ ವರ್ಗದವರ ಅಭಿವೃದ್ಧಿಪರ ಇದ್ದು ಸರ್ವ ಜನಾಂಗದ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ ಎಂದರು.

ಕಾಂಗ್ರೆಸ್ ಪಕ್ಷದ ಮುಖಂಡರಾದ ಬಸವರಾಜಪ್ಪ ಗೌಡ ತಂಗಡಗಿ, ಮಲ್ಲಪ್ಪ, ಮಹದೇವಪ್ಪ ಸಾಲಿಮನಿ, ರಾಯಪ್ಪ ಸಾಲಿಮನಿ, ಮಾಣಿಕ್ ರೆಡ್ಡಿ ಸೇರಿದಂತೆ ಹಲವಾರು ಹಿರಿಯ ಮುಖಂಡರು ಉಪಸ್ಥಿತರಿದ್ದರು.

ಸಗರ ಗ್ರಾಮದ ಭೀಮಣ್ಣ ನಾಯ್ಕೋಡಿ, ಚಂದಪ್ಪ ಸೇರಿ, ಬಸವರಾಜ, ಶಂಕ್ರಪ್ಪ ಬೇಟೆಗಾರ, ಗೋಪಾಲ ರೆಡ್ಡಿ, ಆನಂದ, ನಾಗಪ್ಪ, ಹನುಮಂತ,ಮಲ್ಲಣ್ಣ ಕಂಠಿ, ಶಂಕ್ರಪ್ಪ, ಲಕ್ಷ್ಮಣಗೌಡ ಸೇರಿದಂತೆ 30ಕ್ಕೂ ಹೆಚ್ಚು ಜನರು ಪಕ್ಷಕ್ಕೆ ಸೇರ್ಪಡೆಗೊಂಡರು.

About The Author