ತಾಲೂಕು ಪತ್ರಕರ್ತರ ದಿನಾಚರಣೆ ಮಾಧ್ಯಮಗಳು ಸಮಾಜ ತಿದ್ದುವ ಕೆಲಸ ಮಾಡಬೇಕು:ಅಮರೇಶ ನಾಯಕ

ಶಹಾಪುರ:ಮಾಧ್ಯಮಗಳು ನಿಷ್ಪಕ್ಷಪಾತವಾದ ವರದಿಗಳನ್ನು ಮಾಡಬೇಕು. ಪತ್ರಕರ್ತರು ಸ್ವತಂತ್ರವಾಗಿದ್ದು, ಸಮಾಜಕ್ಕೆ ಮಾದರಿಯಾಗಿರುವಂತಹ ವರದಿಗಳನ್ನು ವರದಿ ಮಾಡುವುದರಿಂದ ಒಳ್ಳೆಯ ಸಂದೇಶ ರವಾನೆಯಾಗುತ್ತದೆ ಎಂದು ಸಂಸದರಾದ ರಾಜಾ ಅಮರೇಶ್ವರ ನಾಯಕ ಹೇಳಿದರು. ನಗರದ ಜಬ್ಬಿ ಸಭಾ ಭವನದಲ್ಲಿ ತಾಲೂಕು ಪತ್ರಕರ್ತರ ದಿನಾಚರಣೆ ಮತ್ತು ತಾಲೂಕು ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಾಧ್ಯಮಗಳು ಕಿವುಡರಂತಾಗಬಾರದು.ಇಂದು ಜವಾಬ್ದಾರಿ ಸ್ಥಾನದಲ್ಲಿದ್ದ ಪತ್ರಕರ್ತರು ಸಮಾಜದ ಆಗು ಹೋಗುಗಳನ್ನು ತಿದ್ದುವಂತ ವರದಿಗಳನ್ನು ಮಾಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಗುರು ಪಾಟೀಲ ಶಿರವಾಳ ಮಾತನಾಡುತ್ತಾ, ಮಾಧ್ಯಮ ಸಂವಿಧಾನದ ಯ ನಾಲ್ಕನೇ ಅಂಗ ಎಂದು ಗುರುತಿಸಿಕೊಂಡಿದೆ. ಇಂದಿನ ದಿನಗಳಲ್ಲಿ ಪತ್ರಕರ್ತರು ಸಾಕಷ್ಟು ಸಂಕಷ್ಟದಲ್ಲಿದ್ದಾರೆ.ಸರ್ಕಾರವು ಪತ್ರಕರ್ತರಿಗೆ ಹಲವು ಸೌಲಭ್ಯಗಳನ್ನು ಒದಗಿಸಿ ಕೊಡಬೇಕಿದೆ ಎಂದು ಹೇಳಿದರು.

ಜಿಲ್ಲಾ ಕಾರ್ಯ ಪತ್ರಕರ್ತರ ಸಂಘದ ಅಧ್ಯಕ್ಷರಾದ ಮಲ್ಲಪ್ಪ ಸಂಕೀನ್ ಮಾತನಾಡುತ್ತಾ,ಪತ್ರಕರ್ತರ ಸಮಸ್ಯೆಗಳನ್ನು ಯಾರು ಗುರುತಿಸುವುದಿಲ್ಲ. ಕೊರೊನಾ ಸಂದರ್ಭದಲ್ಲಿ ನಾವು ಪ್ರಾಣವನ್ನು ಬದಿಗೊತ್ತಿ ಹಲವಾರು ಸುದ್ದಿಗಳನ್ನು ಪ್ರಕಟಿಸಿದ್ದೇವೆ. ಆದರೂ ನಮ್ಮನ್ನು ಕಡೆಗಣಿಸಲಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.ಪತ್ರಕರ್ತರು ಪಕ್ಷಾತೀತವಾಗಿರಬೇಕು.ಸಮಾಜವನ್ನು ತಿದ್ದುವಂತಹ ವರದಿಗಳನ್ನು ಪ್ರಕಟಿಸಬೇಕು. ನಾವು ನೋಡಿರುವ ದೃಷ್ಟಿಕೋನ ಬದಲಾಗಬೇಕಿದೆ ಎಂದು ಹೇಳಿದರು. ಇಂದಿನ ದಿನ ಪತ್ರಕರ್ತರು ಬಾಡಿಗೆ ಮನೆಯಲ್ಲಿ ಸುಮಾರು ವರ್ಷಗಳಿಂದ ಜೀವನ ಸಾಗಿಸುತ್ತಿದ್ದಾರೆ. ಅಂತವರಿಗೆ ಸರಕಾರ ಹಲವು ಸೌಲಭ್ಯಗಳನ್ನು ಒದಗಿಸಬೇಕಿದೆ. ಶಹಾಪುರದ ಶಾಸಕರಾದ ಶರಣಬಸಪ್ಪಗೌಡ ದರ್ಶನಾಪುರ ಪತ್ರಕರ್ತರಿಗೆ ನಿವೇಶನ ಒದಗಿಸಿ ಕೊಟ್ಟಿದ್ದಾರೆ. ಇನ್ನುಳಿದ ಪತ್ರಕರ್ತರಿಗೂ ನಿವೇಶನ ಒದಗಿಸಿಕೊಡಬೇಕು ಎಂದು ಹೇಳಿದರು.ನಗರಸಭೆಯಿಂದ ಪತ್ರಕರ್ತರ ನಿಧಿ ಸ್ಥಾಪಿಸಿ ಸುಮಾರು ಐದರಿಂದ ಹತ್ತು ಲಕ್ಷ ರೂಪಾಯಿ ಇಡುವುದರಿಂದ ಪತ್ರಕರ್ತರ ವಿದ್ಯಾಭ್ಯಾಸ ಸೇರಿದಂತೆ ಇತರ ಮೂಲಸೌಕರ್ಯಗಳಿಗೆ ಅನುಕೂಲವಾಗುತ್ತದೆ ಎಂದು ನಗರಸಭೆಯ ಅಧಿಕಾರಿಗಳಿಗೆ ಮನವಿ ಮಾಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಶರಣಾರ್ಥಿ ಕನ್ನಡಿಗರೇ ಪತ್ರಿಕೆಯ ಸಂಪಾದಕರಾದ ಶರಣು ಗದ್ದಿಗೆಯವರು, ಸ್ಥಳೀಯವಾಗಿ ಕೆಲವು ಪತ್ರಕರ್ತರಿಗೆ ನಿವೇಶನಗಳನ್ನು ಒದಗಿಸಿಕೊಡಲಾಗಿದೆ.ಮುಂದಿನ ದಿನಗಳಲ್ಲಿ ಇನ್ನುಳಿದ ಪತ್ರಕರ್ತರಿಗೆ ನಿವೇಶನಗಳನ್ನು ಒದಗಿಸಿಕೊಡಲಾಗುವುದು ಎಂದು ಶಾಸಕರು ಭರವಸೆ ನೀಡಿದ್ದಾರೆ ಎಂದು ಹೇಳಿದರು.

ಪೂಜ್ಯರಾದ ಅಜೇಂದ್ರ ಸ್ವಾಮಿಗಳು ಮತ್ತು ಬಸವಯ್ಯ ಶರಣರು ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು.ನಿಕಟ ಪೂರ್ವ ಅಧ್ಯಕ್ಷರಾದ ನಾರಾಯಣಚಾರ್ಯ ಸಗರ ನೂತನ ತಾಲೂಕು ಅಧ್ಯಕ್ಷರಾದ ಮಲ್ಲಿಕಾರ್ಜುನ್ ಮುದ್ನೂರರಿಗೆ ಅಧಿಕಾರ ಹಸ್ತಾಂತರ ಮಾಡಿದರು.

ಅಧ್ಯಕ್ಷರಾದ ಮಲ್ಲಿಕಾರ್ಜುನ್ ಮುದ್ನೂರ ರಚಿತ ಸುಜಲ ಕವನ ಸಂಕಲನವನ್ನು ಈ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಬಾಪುಗೌಡ ದರ್ಶನಾಪುರ ಸೇರಿದಂತೆ ಗಣ್ಯರು ಜಿಲ್ಲಾಮಟ್ಟದ ಮತ್ತು ತಾಲೂಕಿನ ಪತ್ರಕರ್ತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿಶಾಲ್ ಕುಮಾರ್ ಸಿಂಧೆ ಕಾರ್ಯಕ್ರಮ ನಿರೂಪಿಸಿದರರು. ಮಹೇಶ ಪತ್ತಾರ ವಂದಿಸಿದರು.

About The Author